ರಾಜ್ಯ

ಹಾವೇರಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ? ನದಾಫ್ ಬಂಧಿಸುವಂತೆ ಮುತಾಲಿಕ್ ಆಗ್ರಹ!

ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ವಿರುದ್ಧ​ ಕಿರುಕುಳ ಆರೋಪ ಕೇಳಿಬಂದಿದೆ. ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಹಾವೇರಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಬಿಸಿಎ ಓದುತ್ತಿದ್ದ ದಲಿತ ಯುವತಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ವಿರುದ್ಧ​ ಕಿರುಕುಳ ಆರೋಪ ಕೇಳಿಬಂದಿದೆ. ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

ಬಿಸಿಎ ಓದುತ್ತಿದ್ದ 22 ವರ್ಷದ ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇನ್ನು ನವೀನ್ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ನವೀನ್ ವಿರುದ್ಧ ಕಳ್ಳತನ ಆರೋಪ ಮಾಡಿದ್ದ ನದಾಫ್, ನವೀನ್ ಮೊಬೈಲ್ ಅನ್ನು ಕಸಿದುಕೊಂಡಿದ್ದನು. ನಂತರ ರಂಜಾನ್​ ನದಾಫ್​, ನವೀನ್ ಮತ್ತು ಶಿಲ್ಪಾರ ಚಾಟ್​ ಮೆಸೆಜ್​ಗಳನ್ನು ನೋಡಿದ್ದು ಶಿಲ್ಪಾ ಮೊಬೈಲ್ ನಂಬರ್ ತೆಗೆದುಕೊಂಡು ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಹೀಗಾಗಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಮಾರ್ಕೆಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT