ಸಂಗ್ರಹ ಚಿತ್ರ 
ರಾಜ್ಯ

IPL 2025: ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ, ಚಿನ್ನಸ್ವಾಮಿ ಕ್ರೀಡಾಂಗಣದ ಮಳಿಗೆಗಳಲ್ಲಿ FDA ತಪಾಸಣೆ

ತಪಾಸಣೆ ವೇಳೆ ಎರಡು ಪ್ರಮುಖ ಸಂಸ್ಥೆಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಐಪಿಎಲ್ ಪಂದ್ಯಗಳು ನಡೆಯುತ್ತಿದ್ದು, ಈ ನಡುವೆ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಪಂದ್ಯಾವಳಿ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣದೊಳಗಿನ ಆಹಾರ ಮಳಿಗೆಗಳಲ್ಲಿ ಶುಕ್ರವಾರ ತಪಾಸಣೆ ನಡೆಸಿದೆ.

ಮಳಿಗೆಗಳಿಗೆ ಭೇಟಿ ನೀಡಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಇಲಾಖೆಯ ಅಧಿಕಾರಿಗಳು ಪ್ರಸಿದ್ಧ ಬ್ರ್ಯಾಂಡ್‌ಗಳು ಸೇರಿದಂತೆ ಮಳಿಗೆಗಳಲ್ಲಿನ ಎಲ್ವಾ ರೀತಿಯ ಆಬಾರ ಮಾದರಿಗಳನ್ನು ಸಂಗ್ರಹಿಸಿವೆ. ಪರೀಕ್ಷೆ ವೇಳೆ ನೈರ್ಮಲ್ಯ ಮಾನದಂಡಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದ್ದೇ ಆದರೆ, ದಂಡ ವಿಧಿಸಲಿದ್ದಾರೆ.

ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಪಂದ್ಯ ನಡೆದಿದ್ದು, ಈ ಕ್ರೀಡಾಂಗಣದೊಳಗೆ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 12 ಆಹಾರ ಮಳಿಗೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಎರಡು ಪ್ರಮುಖ ಸಂಸ್ಥೆಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ಯಾಕೇಜ್ಡ್ ಕುಡಿಯುವ ನೀರಿನ ಕಂಪನಿ ಹಾಗೂ ಸಿಹಿತಿಂಡಿಗಳು, ಮತ್ತು ಮಸಾಲೆ ಪುಡಿಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಆಹಾರ ಬ್ರ್ಯಾಂಡ್'ನ ಕಂಪನಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಪಿಜ್ಜಾ, ಬರ್ಗರ್ ಮತ್ತು ಇತರ ತಿಂಡಿಗಳನ್ನು ಮಾರಾಟ ಮಾಡಲು ಹೆಸರುವಾಸಿಯಾದ ಹಲವಾರು ಜನಪ್ರಿಯ ಆಹಾರ ಬ್ರ್ಯಾಂಡ್ ಹೊಂದಿರುವ ಕಂಪನಿಗಳ ಆಹಾರ ಮಾದರಿಗಳನ್ನೂ ಕೂಡ ಅಧಿಕಾರಿಗಳು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಿದ್ದಾರೆಂದು ವರದಿಗಳು ತಿಳಿಸಿವೆ.

ಕಳೆದ ವರ್ಷದ ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕೊರತೆಯ ಬಗ್ಗೆ ಜನರು ಕಳವಳ ವ್ಯಕ್ತಪಡಿಸಿದ್ದರು. ಈ ಸಂಬಂಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪಂದ್ಯದ ಸಮಯದಲ್ಲಿ ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ, ಇಲಾಖೆಯು ಯಶವಂತಪುರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶಗಳಲ್ಲಿರುವ ಆಹಾರ ಮಳಿಗೆಗಳಲ್ಲಿಯೂ ತಪಾಸಣೆ ನಡೆಸಿತ್ತು.

ಕೆಲವು ತಿಂಗಳುಗಳಿಂದ ತಪಾಸಣೆ ತೀವ್ರತರವಾಗಿ ನಡಸಲಾಗುತ್ತಿದ್ದು, ಹಲವು ಮಳಿಗೆಗಳಲ್ಲಿ ಗುಣಮಟ್ಟ ಕಳಪೆಯಾಗಿರುವುತು ತಿಳಿದುಬಂದಿದೆ. ಪರಿಶೀಲನೆಯ ಸಮಯದಲ್ಲಿ ಅಂಗಡಿ ಮಾಲೀಕರು ಸಹಕರಿಸರಲಿಲ್ಲ. ತಪಾಸಣೆಗಳಿಂದ ತಮ್ಮ ವ್ಯವಹಾರಕ್ಕೆ ಹಾನಿಯಾಗುತ್ತದೆ ಎಂದು ಆಕ್ಷೇಪಣೆಗಳನ್ನೂ ಎತ್ತಿದರು. ಕೆಲವು ಕಾರ್ಮಿಕರು ಕೂಡ ಕಳವಳ ವ್ಯಕ್ತಪಡಿಸಿದರು.

ಕಡಿಮೆ ಬೆಲೆಯ ಆಹಾರಕ್ಕಾಗಿ ಈ ಮಳಿಗೆಗಳೇ ನಮಗಿರುವ ಆಯ್ಕೆಯಾಗಿದೆ ಎಂದು ಹೇಳಿದರು ಎಂದು ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT