ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿ: ಲಿವಿಂಗ್ ಟುಗೆದರ್ ಗೆ ಪೋಷಕರ ವಿರೋಧ; ರೈಲಿಗೆ ತಲೆಕೊಟ್ಟ ಯುವಕ, ಭೀಕರ ದೃಶ್ಯ!

ಮಹಿಳೆಯೊಬ್ಬರ ಜೊತೆ ತಮ್ಮ ಮಗ ಲಿವಿಂಗ್ ಟುಗೆದರ್ ನಲ್ಲಿರುವ ವಿಚಾರದ ತಿಳಿದ ಪೋಷಕರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಾರೆ.

Vishwanath S
Updated On : 20 Apr 2025, 4:45 pm

ಕಲಬುರಗಿ: ಮಹಿಳೆಯೊಬ್ಬರ ಜೊತೆ ತಮ್ಮ ಮಗ ಲಿವಿಂಗ್ ಟುಗೆದರ್ ನಲ್ಲಿರುವ ವಿಚಾರದ ತಿಳಿದ ಪೋಷಕರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ನಾಗನಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಲಿವಿಂಗ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಮಹಿಳೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದು ಯುವಕನ ಮನವೊಲಿಸಲು ಯತ್ನಿಸಿದ್ದಾಳೆ. ಆದರೆ ಇದಕ್ಕೆ ಕಿವಿಗೊಡದ ಶಿವಕುಮಾರ್ ರೈಲಿಗೆ ರೈಲಿನ ಮುಂದೆ ಬಿದ್ದಿದ್ದಾನೆ. ಈ ವೇಳೆ ಮಹಿಳೆ ಆತನ ರಕ್ಷಣೆಗೆ ಮುಂದಾಗಿದ್ದು ರಕ್ಷಿಸಲು ಸಾಧ್ಯವಾಗಿಲ್ಲ. ರಕ್ಷಿಸಲು ಹೋಗಿದ್ದ ಮಹಿಳೆಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read

ಕಾರವಾರ: ಚಾಕುವಿನಿಂದ ಇರಿದು ಮಾಜಿ ನಗರಸಭೆ ಸದಸ್ಯನ ಹತ್ಯೆ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement