ಓಂ ಪ್ರಕಾಶ್ 
ರಾಜ್ಯ

ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದ ಓಂ ಪ್ರಕಾಶ್ ಪತ್ನಿಯಿಂದಲೇ ಕೊಲೆಯಾಗಿದ್ದೇಕೆ?: ಇಲ್ಲಿದೆ ಅಸಲಿ ಕಾರಣ!

ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ್ ಅವರಿಗೆ 7-8 ಬಾರಿ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು.

ಬೆಂಗಳೂರು: ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು ಇಡೀ ನಗರವನ್ನೇ ಬೆಚ್ಚಿಬೀಳಿಸಿತ್ತು. ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಓಂ ಪ್ರಕಾಶ್ ಅವರನ್ನು ಅವರ ಧರ್ಮಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ. ಈ ಕೊಲೆಗೆ ನಿಖರ ಕಾರಣವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

68 ವರ್ಷದ ಓಂ ಪ್ರಕಾಶ್‌ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್‌ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯ ಕುರಿತು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್‌ಜಾನ್ಸ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲೆ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿವೃತ್ತ ಅಧಿಕಾರಿಯನ್ನು ಕಂಡು ಶಾಕ್‌ ಆಗಿದ್ದಾರೆ. ಇನ್ನು ಮನೆಯಲ್ಲೇ ಇದ್ದ ಅವರ ಪತ್ನಿ ಹಾಗೂ ಮಗಳನ್ನು ವಿಚಾರಣೆಗೆ ಕರೆದೊಯ್ಯಿದಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದುತಿಳಿದುಬಂದಿದೆ. ಓಂ ಪ್ರಕಾಶ್‌ ಹಾಗೂ ಅವರ ಪತ್ನಿ ಜಗಳ ನೆರೆ ಹೊರೆ, ಸಂಬಂಧಿಕರು ಹಾಗೂ ಹಲವು ನಿವೃತ್ತ ಪೊಲೀಸ್‌ ಅಧಿಕಾರಿಗಳಿಗೆ ತಿಳಿದಿತ್ತು. ಕೆಲ ದಿನಗಳಿಂದ ಜಗಳ ತಾರಕಕ್ಕೇರಿ ಪತ್ನಿ ಮನೆಯಲ್ಲಿ ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು ಎನ್ನಲಾಗಿದೆ. ಇನ್ನು ಓಂ ಪ್ರಕಾಶ್ ಅವರು ತಮ್ಮ ಸಹೋದರಿ ಹೆಸರಲ್ಲಿ ಜಮೀನು ಮಾಡಿದ್ದು ಅದನ್ನು ಹಿಂಪಡೆಯುವಂತೆ ಗಂಡನ ಮೇಲೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.

1993ರಲ್ಲಿ ಭಟ್ಕಳ ಕೋಮು ಗಲಭೆಗಳನ್ನು ನಿರ್ವಹಿಸಲು ಅವರನ್ನು ಆಯ್ಕೆ ಮಾಡಲಾಗಿತ್ತು. 1981ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT