ಶನಿವಾರ ನಾಗರಭಾವಿ ವೃತ್ತದ ಬಳಿ ಕಾರಿನ ಮೇಲೆ ಬಿದ್ದ ಅನಧಿಕೃತ ಬ್ಯಾನರ್ (Photo | Express)
ರಾಜ್ಯ

ಬೆಂಗಳೂರು: ಅನಧಿಕೃತ ಬ್ಯಾನರ್ ಗಾಳಿಗೆ ಮುರಿದು ಬಿದ್ದು ನಾಲ್ವರಿಗೆ ಗಾಯ

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಬೆಂಗಳೂರು: ಅನಧಿಕೃತ ಬ್ಯಾನರ್ ಮುರಿದು ಬಿದ್ದ ಪರಿಣಾಮ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಗರದ ನಾಗರಭಾವಿ ವೃತ್ತದ ಬಳಿ ಶನಿವಾರ ನಡೆದಿದೆ.

ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಅಭಿಮಾನಿಗಳು ಫ್ಲೆಕ್ಸ್'ಗಳನ್ನು ಹಾಕಿದ್ದರು ಎನ್ನಲಾಗಿದೆ.

ಮಳೆ ಹಾಗೂ ಬಲವಾದ ಗಾಳಿಯ ಪರಿಣಾಮ ಸಂಜೆ 4 ಗಂಟೆ ಸುಮಾರಿಗೆ ಬ್ಯಾನರ್ ಮುರಿದು ಬಿದ್ದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗಳು ಸೇರಿದಂತೆ ನಾಲ್ವರಿಗ ಗಾಯಳಾಗಿವೆ.

ಬ್ಯಾನರ್ ಮುರಿದು ಬಿದ್ದ ಪರಿಣಾಮ ಕಾರು ಹಾನಿಗೊಳಗಾಗಿದ್ದು. ಘಟನೆ ಬಳಿಕ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಏತನ್ಮಧ್ಯೆ, ಈವರೆಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ಘಟನೆ ಬೆನ್ನಲ್ಲೇ ನೆಟ್ಟಿಗರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿದ್ದಾರೆ. ನಗರದಲ್ಲಿ ಬ್ಯಾನರ್‌ಗಳನ್ನು ನಿಷೇಧಿಸಲಾಗಿದೆ. ಆದರೂ, ಮೂಲೆಮೂಲೆಗಳಲ್ಲೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video