ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ!

ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಕೆಳ ಭಾಗಕ್ಕೆ ( ಅಂಡರ್‌ಕ್ಯಾರೇಜ್) ಡಿಕ್ಕಿ ಹೊಡೆದಿದೆ. ಆದರೆ, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ ಹೊಡೆದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಕೆಳ ಭಾಗಕ್ಕೆ ( ಅಂಡರ್‌ಕ್ಯಾರೇಜ್) ಡಿಕ್ಕಿ ಹೊಡೆದಿದೆ. ಆದರೆ, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ 12:15 ರ ಸುಮಾರಿನಲ್ಲಿ ಪಾರ್ಕಿಂಗ್ ಬೇ (71 ಆಲ್ಫಾ) ಬಳಿ ಈ ಘಟನೆ ಸಂಭವಿಸಿದೆ.

ಆದರೆ ಯಾವುದೇ ಗಾಯದ ಕುರಿತು ವರದಿಯಾಗಿಲ್ಲ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

2022 ರಿಂದ ಇಂಜಿನ್ ಸಮಸ್ಯೆಗಳಿಂದಾಗಿ ಇಂಡಿಗೊ A320 ವಿಮಾನವನ್ನು ಪಾರ್ಕಿಂಗ್ ಬೇ ನಲ್ಲಿ ನಿಲ್ಲಿಸಲಾಗಿತ್ತು. ಗ್ರೌಂಡ್ ನಿರ್ವಹಣೆಯ ಕಂಪನಿಯಿಂದ ನಿಯೋಜಿಸಲಾಗಿದ್ದ ಮಿನಿ ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದಾಗ ಇಂಡಿಗೋ ವಿಮಾನದ ಅಂಡರ್ ಕ್ಯಾರೇಜ್ ಗೆ ಡಿಕ್ಕಿ ಹೊಡೆದಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಆಕಾಶ್ ಏರ್ ಸಿಬ್ಬಂದಿಗಾಗಿ ಆ ಮಿನಿ ಬಸ್ ನ್ನು ಬಳಸಲಾಗುತ್ತಿತ್ತು. ಅದೃಷ್ಟವಶಾತ್, ಆ ಸಂದರ್ಭದಲ್ಲಿ ಚಾಲಕ ಮಾತ್ರ ಮಿನಿ ಬಸ್ ನಲ್ಲಿದ್ದರು ಎನ್ನಲಾಗಿದೆ.

ಈ ಸಂಬಂಧ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ತಿಳಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಯಾಣಿಕರು, ವಿಮಾನಯಾನ ಪಾಲುದಾರರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಗಳ ಸುರಕ್ಷತೆ ಮತ್ತು ಭದ್ರತೆಯು ನಮ್ಮ ಹೆಚ್ಚಿನ ಆದ್ಯತೆಯಾಗಿದೆ ಎಂದು ಬಿಐಎಎಲ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಇಂಡಿಗೋ ವಕ್ತಾರರು, ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel