ಡಾ. ಜಿ. ಪರಮೇಶ್ವರ್ 
ರಾಜ್ಯ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: ತನಿಖೆ ನಂತರವೇ ಯಾರು ಕೊಂದರು ಎಂಬುದು ತಿಳಿಯಲಿದೆ- ಜಿ ಪರಮೇಶ್ವರ

ನಿವೃತ್ತ ಐಪಿಎಸ್ ಅಧಿಕಾರಿ ಭಾನುವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ತಮ್ಮ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿತ್ತು.

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ (DGP) ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದರೂ, ಅವರ ಹತ್ಯೆಯ ಹಿಂದಿನ ಸತ್ಯವನ್ನು ವಿವರವಾದ ತನಿಖೆಯಿಂದ ಹೊರತರಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ನಿವೃತ್ತ ಐಪಿಎಸ್ ಅಧಿಕಾರಿ ಭಾನುವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ತಮ್ಮ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಮೃತಪಟ್ಟಿರುವುದು ಪತ್ತೆಯಾಗಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, 'ಮಾಜಿ ಡಿಜಿಪಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲಾಗಿದೆ. ಅವರ ಪತ್ನಿ (ಪಲ್ಲವಿ) ಅವರನ್ನು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ವಿವರವಾದ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತದೆ' ಎಂದು ತಿಳಿಸಿದರು.

2015ರಲ್ಲಿ ನಾನು ಗೃಹ ಸಚಿವರಾಗಿದ್ದಾಗ ಓಂ ಪ್ರಕಾಶ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆಗಿದ್ದರು. ತನಿಖೆ ಆರಂಭವಾಗಿದೆ ಮತ್ತು ತನಿಖಾಧಿಕಾರಿ ಇನ್ನೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲವಾದ್ದರಿಂದ ತನಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೊಲೆಗೆ ಕಾರಣ ಏನೆಂಬುದು ತನಿಖೆಯ ನಂತರವಷ್ಟೇ ತಿಳಿಯಲಿದೆ ಎಂದು ಹೇಳಿದರು.

ಪಲ್ಲವಿ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ದಂಪತಿ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ತನಗೆ ತಿಳಿದಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT