ಓಂ ಪ್ರಕಾಶ್ ಮೃತದೇಹದ ಬಳಿ ಸಂಬಂಧಿಕರ ಆಕ್ರಂದನ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಕರ್ನಾಟಕ ಮಾಜಿ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ

ಇಂದು ಸಂಜೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅವರ ಮಗ ಕಾರ್ತಿಕೇಶ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಬೆಂಗಳೂರು: ಪತ್ನಿ ಮತ್ತು ಮಗಳಿಂದ ಹತ್ಯೆಗೀಡಾದ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಅಂತ್ಯಕ್ರಿಯೆ ಸೋಮವಾರ ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಇಂದು ಸಂಜೆ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅವರ ಮಗ ಕಾರ್ತಿಕೇಶ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.

ಮಾಜಿ ಡಿಜಿಪಿಯ ಸಂಬಂಧಿಕರು, ಸ್ನೇಹಿತರು ಹಾಗೂ ಹಲವು ಗಣ್ಯರು ಅಂತಿಮ ನಮನ ಸಲ್ಲಿಸದರು.

ಅಂತ್ಯಕ್ರಿಯೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕೇಶ್, "ನಿನ್ನೆಯ ಘಟನೆಯ ನಂತರ, ನಾನು ದೂರು ನೀಡಿದ್ದೇನೆ. ಪೊಲೀಸರು ತಮ್ಮ ಕೆಲಸ ಮಾಡುತ್ತಿದ್ದಾರೆ ಮತ್ತು ನನಗೆ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ. ತನಿಖೆಯಿಂದ ಎಲ್ಲವೂ ಬಹಿರಂಗಗೊಳ್ಳುವುದರಿಂದ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ" ಎಂದರು.

68 ವರ್ಷದ ನಿವೃತ್ತ ಐಪಿಎಸ್ ಅಧಿಕಾರಿಯನ್ನು ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಾರ್ತಿಕೇಶ್ ಅವರ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಿಹಾರದ ಚಂಪಾರಣ್ ಮೂಲದ ಓಂ ಪ್ರಕಾಶ್ ಅವರು ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಮಾರ್ಚ್ 1, 2015 ರಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!