ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಅತಿಯಾದ ಶಿಸ್ತಿನ ಪಾಠದಿಂದ ಮಾನಸಿಕ ಕಿರಿಕಿರಿ; ತಾಯಿ ಜೊತೆ ಸೇರಿ ತಂದೆ ಹತ್ಯೆಗೈದ ಪುತ್ರ!

ಪುತ್ರ ಸಮೀರ್‌ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಬೋಲು ಅರಬ್‌ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಎಚ್ಚರಿಕೆ ನೀಡುತ್ತಿದ್ದರು.

ಬೆಂಗಳೂರು: ತಂದೆಯ ಅತಿಯಾದ ಶಿಸ್ತಿನ ಪಾಠಕ್ಕೆ ಬೇಸತ್ತ ಪುತ್ರನೊಬ್ಬ ತಾಯಿ ಜತೆ ಸೇರಿ ನಿವೃತ್ತ ಸೈನಿಕನನ್ನು ಹತ್ಯೆಗೈದಿರುವ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿವೇಕನಗರ ನಿವಾಸಿ ಬೋಲು ಅರಬ್‌ (47) ಕೊಲೆಯಾದ ಮಾಜಿ ಸೈನಿಕ. ಭಾನುವಾರ ಬೆಳಗ್ಗೆ ಸುಮಾರು 1.30ಕ್ಕೆ ದುರ್ಘ‌ಟನೆ ನಡೆದಿದೆ. ಈ ಸಂಬಂಧ ಮೃತನ ಪುತ್ರ ಸಮೀರ್‌(19) ಮತ್ತು ಪತ್ನಿ ತಬಸ್ಸುಮ್‌ (36) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಹಾರಾಷ್ಟ್ರ ಮೂಲದ ಬೋಲು ಅರಬ್‌ ನಿವೃತ್ತ ಸೈನಿಕರಾಗಿದ್ದು, 2003ರಲ್ಲಿ ತಬಸ್ಸುಮ್‌ರನ್ನು ಮದುವೆಯಾಗಿ ಪುತ್ರನ ಜತೆ ವಿವೇಕನಗರದಲ್ಲಿ ವಾಸವಾಗಿದ್ದರು. ಪುತ್ರ ಸಮೀರ್‌ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ. ಬೋಲು ಅರಬ್‌ ಶಿಸ್ತಿನ ವ್ಯಕ್ತಿಯಾಗಿದ್ದರು. ಪತ್ನಿ ಮತ್ತು ಪುತ್ರನಿಗೂ ಶಿಸ್ತಿನಿಂದ ಇರುವಂತೆ ಎಚ್ಚರಿಕೆ ನೀಡುತ್ತಿದ್ದರು.

ವಿನಾಕಾರಣ ಮನೆಯಿಂದ ಹೊರಗೆ ಹೋಗುವಂತಿಲ್ಲ. ಇಂತಿಷ್ಟೇ ಊಟ ಮಾಡಬೇಕೆಂದು ನಿಯಮ ಮಾಡಿದ್ದರು. ಈ ಅತಿಯಾದ ಶಿಸ್ತಿನಿಂದ ಪುತ್ರ ಮತ್ತು ಪತ್ನಿ ಬೇಸತ್ತಿದ್ದರು. ಹೀಗಾಗಿ ತಾಯಿ-ಮಗ ಸೇರಿ ಬೋಲು ಅರಬ್‌ನನ್ನು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

ಶನಿವಾರ ರಾತ್ರಿ ಊಟಕ್ಕೆ ನಿದ್ರೆ ಮಾತ್ರೆ ಬರೆಸಿ ಬೋಲು ಅರಬ್‌ ಗೆ ನೀಡಲಾಗಿತ್ತು. ಊಟ ಮಾಡಿದ ಬಳಿಕ ಬೋಲು ಅರಬ್‌ ಗಾಢ ನಿದ್ದೆಗೆ ಜಾರಿದಾಗ ಕೊಲೆ ಮಾಡಿದ್ದಾರೆ. ಬೋಲು ಅರಬ್‌ ಮೃತಪಟ್ಟಿರುವುದು ಖಚಿತವಾದ ಬಳಿಕ ಸಮೀರ್‌, 112 ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ಯಾರೋ ನಾಲ್ಕೈದು ಮಂದಿ ಮನೆಗೆ ನುಗ್ಗಿ ತಂದೆಯನ್ನು ಕೊಲೆ ಮಾಡಿ ಪರಾರಿಯಾದರು ಎಂದು ಹೇಳಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ತಾಯಿ-ಮಗನ ವರ್ತನೆ ಬಗ್ಗೆ ಅನುಮಾನಗೊಂಡು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ. ಬಳಿಕ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!