ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಹೈಕೋರ್ಟ್‌ನ 4 ನ್ಯಾಯಾಧೀಶರ ವರ್ಗಾವಣೆ: ಬೆಂಗಳೂರು ವಕೀಲರ ಸಂಘ ವಿರೋಧ

ಏಪ್ರಿಲ್ 19 ರಂದು ಕೊಲಿಜಿಯಂ ಮಾಡಿದ ನಿರ್ಣಯದ ಪ್ರಕಾರ, ಏಪ್ರಿಲ್ 15 ಮತ್ತು ಏಪ್ರಿಲ್ 19 ರಂದು ನಡೆದ ಸಭೆಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಬೆಂಗಳೂರು: ಉನ್ನತ ನ್ಯಾಯಾಲಯಗಳ ಮಟ್ಟದಲ್ಲಿ ‘ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯನ್ನು ತುಂಬುವ’ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ್ದು, ಇದಕ್ಕೆ ಬೆಂಗಳೂರು ವಕೀಲರ ಸಂಘ (ಎಎಬಿ) ವಿರೋಧ ವ್ಯಕ್ತಪಡಿಸಿದೆ.

ಏಪ್ರಿಲ್ 19 ರಂದು ಕೊಲಿಜಿಯಂ ಮಾಡಿದ ನಿರ್ಣಯದ ಪ್ರಕಾರ, ಏಪ್ರಿಲ್ 15 ಮತ್ತು ಏಪ್ರಿಲ್ 19 ರಂದು ನಡೆದ ಸಭೆಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಕರ್ನಾಟಕ ಹೈಕೋರ್ಟ್‌ನಿಂದ ನ್ಯಾ. ಹೇಮಂತ್‌ ಚಂದ್ರಶೇಖರ್‌ ಅವರನ್ನು ಮದ್ರಾಸ್‌, ನ್ಯಾ. ಕೃಷ್ಣನ್‌ ನಟರಾಜನ್‌ ಅವರನ್ನು ಕೇರಳ, ನ್ಯಾ. ನೇರನಹಳ್ಳಿ ಶ್ರೀನಿವಾಸನ್‌ ಸಂಜಯ್‌ ಗೌಡ ಅವರನ್ನು ಗುಜರಾತ್‌, ನ್ಯಾ. ಶ್ರೀಪಾದ ಕೃಷ್ಣ ದೀಕ್ಷಿತ್‌ ಅವರನ್ನು ಒಡಿಶಾ ಹೈಕೋರ್ಟ್‌ಗಳಿಗೆ ಕಳಿಸಲಾಗಿದೆ. ತೆಲಂಗಾಣದಿಂದ ನ್ಯಾ. ಪೆರುಗು ಶ್ರೀಸುಧಾ ಹಾಗೂ ಆಂಧ್ರಪ್ರದೇಶದಿಂದ ನ್ಯಾ. ಡಾ.ಕುಂಭಜಾಡಾಲ ಮನ್ಮಥ ರಾವ್‌ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ನ್ಯಾ. ಕಾಸೋಜು ಸುರೇಂದ್ರ ಅವರನ್ನು ತೆಲಂಗಾಣದಿಂದ ಮದ್ರಾಸ್‌ ಹೈಕೋರ್ಟ್‌ಗೆ ಕಳಿಸಲಾಗಿದೆ.

ವರ್ಗಾವಣೆಗೆ ಬೆಂಗಳೂರಿನ ವಕೀಲರ ಸಂಘ (AAB) ವಿರೋಧ ವ್ಯಕ್ತಪಡಿಸಿದ್ದು, ಶಿಫಾರಸು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಲ್ಲದೆ, ಹೈಕೋರ್ಟ್‌ನ ಸುವರ್ಣ ಮಹೋತ್ಸವ ದ್ವಾರದ ಬಳಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಅಲ್ಲದೆ, ಮುಂದಿನ ನಡೆ ಕುರಿತು ಚರ್ಚಿಸಲು ಇಂದು ಮಧ್ಯಾಹ್ನ 1.30 ಕ್ಕೆ ವಿಶೇಷ ಸಭೆ ನಡೆಸಲು ನಿರ್ಧರಿಸಿದೆ.

ವರ್ಗಾವಣೆಗೆ ಸಂಬಂಧಿಸಿದಂತೆ ಎಲ್ಲಾ ರಿಹಿಯ ವಕೀಲರೊಂದಿಗೆ ಸಭೆ ನಡೆಸಲಾಗಿದ್ದು, ನ್ಯಾಯಾಧೀಶರ ವರ್ಗಾವಣೆ ಕ್ರಮ ತಪ್ಪಾಗಿದೆ ಮತ್ತು ಅದನ್ನು ಹಿಂಪಡೆಯಬೇಕೆಂದು ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ಎಎಬಿ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ, ವರ್ಗಾವಣೆ ಪ್ರಸ್ತಾವನೆಯನ್ನು ತಕ್ಷಣವೇ ಹಿಂಪಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಸದಸ್ಯರಿಗೆ, ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಕಾನೂನು ಸಚಿವರಿಗೆ ಮನವಿ ಪತ್ರಗಳನ್ನು ಕಳುಹಿಸುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT