ಬಿಎಸ್ ಯಡಿಯೂರಪ್ಪ 
ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಸಾರ್ವಜನಿಕ ಸೇವಕರ ವಿರುದ್ಧದ ಪ್ರಕರಣಗಳನ್ನು ಮರು ತನಿಖೆಗೆ ಕೋರ್ಟ್​ ಮತ್ತು ಸರ್ಕಾರದ ಪೂರ್ವಾನುಮತಿ ಬೇಕೋ ಬೇಡವೋ ಎಂಬುದರ ಜಿಜ್ಞಾಸೆ ಉಂಟಾಗಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಮೇಲಿನ ಅಕ್ರಮ ಡಿನೋಟಿಫಿಕೇಶನ್​ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಪೂರ್ವಾನುಮತಿ ಬೇಕೇ ಬೇಡವೇ ಎಂಬ ಜಿಜ್ಞಾಸೆಯನ್ನು ಇತ್ಯರ್ಥ ಮಾಡಲು ಸುಪ್ರೀಂ ಕೋರ್ಟ್​ ವಿಸ್ತೃತ ಪೀಠ ರಚಿಸಲಿದೆ.

2011ರ ಭೂ ಡಿನೋಟಿಫಿಕೇಶನ್ ರದ್ದುಗೊಳಿಸುವಂತೆ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಸುಪ್ರೀಂ ಕೋರ್ಟ್‌ ನ್ಯಾ. ಜೆ.ಬಿ. ಪರ್ದಿವಾಲ ಹಾಗೂ ನ್ಯಾ. ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಪೀಠವು ತೀರ್ಪು ಪ್ರಕಟಿಸಿತು.

ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಥಮಿಕ ಪೂರ್ವಾನುಮತಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಪೊಲೀಸರು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸಲು ಅನುಮೋದನೆ ಪಡೆಯುವ ಮೊದಲು ಸೂಕ್ತ ಪ್ರಾಧಿಕಾರ ಅಥವಾ ಸರ್ಕಾರವು ಪರಿಶೀಲಿಸಬೇಕಾದ ಪಿಸಿ ಕಾಯ್ದೆಯ ಸೆಕ್ಷನ್​ 17ಎನಲ್ಲಿ ಪರಿಗಣಿಸಲಾದ ಸಂಬಂಧಿತ ಪರಿಗಣನೆಗಳು ಯಾವುದು ಎಂಬುದರ ಕುರಿತು ನಿರ್ಣಯಿಸಬೇಕಾಗಿದೆ ಎಂದು ಕೋರ್ಟ್​ ಹೇಳಿದೆ.

ಏಪ್ರಿಲ್‌ 4ರಂದು ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಕೋರ್ಟ್‌ ತೀರ್ಪು ನೀಡಿದೆ.

ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಪುನಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ 5 ಜನವರಿ 2021 ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ನ್ಯಾ. ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠ ಏಪ್ರಿಲ್‌ 4ರಂದು ವಿಚಾರಣೆ ಪೂರ್ಣಗೊಳಿಸಿತು.

ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಕೆ.ಎಸ್‌ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011ರಲ್ಲಿ26 ಎಕರೆ ಡಿನೋಟಿಫಿಕೇಷನ್‌ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ 2021ರ ಜನವರಿ 27ರಂದು ಆದೇಶ ನೀಡಿತ್ತು.

ಸಾರ್ವಜನಿಕ ಸೇವಕರ ವಿರುದ್ಧದ ಪ್ರಕರಣಗಳನ್ನು ಮರು ತನಿಖೆಗೆ ಕೋರ್ಟ್​ ಮತ್ತು ಸರ್ಕಾರದ ಪೂರ್ವಾನುಮತಿ ಬೇಕೋ ಬೇಡವೋ ಎಂಬುದರ ಜಿಜ್ಞಾಸೆ ಉಂಟಾಗಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್