ನಿವೃತ್ತ ಡಿಜಿಪಿ ಓಂ ಪ್ರಕಾಶ್ 
ರಾಜ್ಯ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: ಪತ್ನಿ ಪಲ್ಲವಿ ತಪ್ಪೊಪ್ಪಿಗೆ; ಮುಂದುವರಿದ ಸಿಸಿಬಿ ತನಿಖೆ- ಜಿ ಪರಮೇಶ್ವರ

'ತನಿಖೆಯನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದೆ. ಏಕೆಂದರೆ, ಅವರು (ಓಂ ಪ್ರಕಾಶ್) ಹಿರಿಯ ಅಧಿಕಾರಿಯಾಗಿದ್ದರು. ಸದ್ಯ ತನಿಖೆ ನಡೆಯುತ್ತಿದೆ' ಎಂದು ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ (DGP) ಓಂ ಪ್ರಕಾಶ್ ಅವರ ಹತ್ಯೆಯ ಹಿಂದಿನ ಉದ್ದೇಶ ಮತ್ತು ಇತರ ವಿವರಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ತನಿಖೆ ನಡೆಸುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆಗೆ ಸಂಬಂಧಿಸಿದಂತೆ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ ಮತ್ತು ಅವರು ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದರು.

'ತನಿಖೆಯನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದೆ. ಏಕೆಂದರೆ, ಅವರು (ಓಂ ಪ್ರಕಾಶ್) ಹಿರಿಯ ಅಧಿಕಾರಿಯಾಗಿದ್ದರು. ಸದ್ಯ ತನಿಖೆ ನಡೆಯುತ್ತಿದೆ' ಎಂದು ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೊಬೈಲ್ ಫೋನ್‌ನಿಂದ ಯಾವುದೇ ಮಾಹಿತಿ ಲಭ್ಯವಾಗಿದೆಯೇ ಎಂದು ಕೇಳಿದಾಗ, 'ನನಗೆ ಗೊತ್ತಿಲ್ಲ'. ತನಿಖೆಯ ಸಮಯದಲ್ಲಿ ಆ ಎಲ್ಲ ವಿಷಯಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.

1981ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ, ಬಿಹಾರ ಮೂಲದವರಾದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥರ ಮೃತದೇಹ ಭಾನುವಾರ ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅವರ ಮೂರು ಅಂತಸ್ತಿನ ಮನೆಯ ನೆಲ ಮಹಡಿಯಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು.

ಪೊಲೀಸ್ ಮೂಲಗಳ ಪ್ರಕಾರ, ಓಂ ಪ್ರಕಾಶ್ ತಮ್ಮ ಮನೆಯಲ್ಲಿ ಊಟದ ಸಮಯದಲ್ಲಿ ಪತ್ನಿಯೊಂದಿಗೆ ಜಗಳವಾಡಿದ್ದಾರೆ. ಜಗಳ ತಾರಕಕ್ಕೇರಿದ್ದು, ಕೊಲೆಗೆ ಕಾರಣವಾಯಿತು ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ.

ಘಟನೆ ನಡೆದಾಗ ಅವರ ಮಗಳು ಕೃತಿ ಕೂಡ ಮನೆಯಲ್ಲಿದ್ದರು ಎಂದು ಅವರು ಹೇಳಿದರು.

ಓಂ ಪ್ರಕಾಶ್ ಅವರ ಮಗ ಕಾರ್ತಿಕೇಶ್ ನೀಡಿದ ದೂರಿನ ಆಧಾರದ ಮೇಲೆ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮ್ಮ ತಾಯಿ ಮತ್ತು ಸಹೋದರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾರ್ತಿಕೇಶ್, ಇಬ್ಬರೂ "ಖಿನ್ನತೆಯಿಂದ" ಬಳಲುತ್ತಿದ್ದಾರೆ ಎಂದಿದ್ದಾರೆ.

ಕೊಲೆಗೆ ಸಂಬಂಧಿಸಿದಂತೆ ಕೃತಿಯ ಇರುವ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದು, ಸದ್ಯ ಅವರನ್ನು ಬಂಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT