ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ; ಅಪರಾಧಿಗೆ ಗಲ್ಲು ಶಿಕ್ಷೆ

ಕಲಬುರಗಿಯ ಆಳಂದ ತಾಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂಬಾತ ಮರಣದಂಡನೆಗೆ ಒಳಗಾದ ಅಪರಾಧಿ.

ಕಲಬುರಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.

ಕಲಬುರಗಿಯ ಆಳಂದ ತಾಲೂಕಿನ ದೇವಂತಗಿ ಗ್ರಾಮದ ಗುಂಡೇರಾವ ಚೋಪಡೆ (28) ಎಂಬಾತ ಮರಣದಂಡನೆಗೆ ಒಳಗಾದ ಅಪರಾಧಿ.

2023ರ ಜುಲೈ 15ರಂದು ಪುಸ್ತಕ ತರಲು ಆಳಂದ ತಾಲೂಕಿನ ಗ್ರಾಮವೊಂದರಿಂದ ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಕೃಷಿ ಕೆಲಸ ಮಾಡುತ್ತಿದ್ದ ಅಪರಾಧಿ ಗುಂಡೇರಾವ ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಬಾಯಿ ಒತ್ತಿ ಹಿಡಿದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಉಸಿರುಗಟ್ಟಿಸಿ ಕೊಂದು ಪಕ್ಕದ ಹೊಲದ ಬಾವಿಯಲ್ಲಿ ಶವವನ್ನು ಎತ್ತಿ ಹಾಕಿದ್ದ.

ಪ್ರಕರಣ ದಾಖಲಿಸಿಕೊಂಡಿದ್ದ ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ನಿಂಬರ್ಗಾ ಠಾಣೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel