ಮುದ್ದನಸ್ವಾಮಿ ಮತ್ತು ದೀಪಿಕಾ 
ರಾಜ್ಯ

ದಾವಣಗೆರೆ: ನಾಪತ್ತೆಯಾಗಿದ್ದ ಪಿಯು ವಿದ್ಯಾರ್ಥಿಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.

ದಾವಣಗೆರೆ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ.

ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು.

ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು. ಪ್ರೇಮಿಗಳು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT