ಸಂತೋಷ್ ಲಾಡ್ 
ರಾಜ್ಯ

ಪಹಲ್ಗಾಮ್ ಉಗ್ರರ ದಾಳಿ: ಮಂಜುನಾಥ್-ಭರತ್ ಮೃತದೇಹ ಇಂದು ರಾಜ್ಯಕ್ಕೆ ಆಗಮನ; ಕನ್ನಡಿಗರ ಸಹಾಯಕ್ಕೆ ಹೆಲ್ಪ್‌ಲೈನ್

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.

ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಮತ್ತು ಭರತ್ ಭೂಷಣ್ ಅವರ ಮೃತದೇಹವನ್ನು ಸಂಜೆಯೊಳಗೆ ಶಿವಮೊಗ್ಗ ಮತ್ತು ಬೆಂಗಳೂರಿಗೆ ಕರೆತರಲು ವಿಮಾನ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರವು ಕಾಶ್ಮೀರದಿಂದ ಪ್ರವಾಸಿಗರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ರಾಜ್ಯದ ಪ್ರವಾಸ ನಿರ್ವಾಹಕರಿಗೆ ಸಹಾಯವಾಣಿ ಸಂಖ್ಯೆಗಳನ್ನು ನೀಡಿದ್ದು, ಅವರ ಮೂಲಕ ಕಾಶ್ಮೀರಕ್ಕೆ ಹೋಗಿರುವ ಕರ್ನಾಟಕದ ಪ್ರವಾಸಿಗರ ವಿವರಗಳನ್ನು ನೀಡಲು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ. ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/ 6E 7731 ವಿಮಾನದ ಮೂಲಕ ತಲುಪಲಿದೆ.

ಇನ್ನು ಉಗ್ರರ ಗುಂಡೇಟಿಗೆ ಬಲಿಯಾದ ಮತ್ತೋರ್ವ ಕರ್ನಾಟಕದ ನಿವಾಸಿ ಭರತ್ ಭೂಷಣ್ ಮೃತದೇಹವೂ, 6E 3105/ 6E 5252 ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಮುಂಬೈ ಮೂಲಕ ಬೆಂಗಳೂರಿಗೆ ತಲುಪಲಿದೆ.

ಮಂಜುನಾಥ್ ಅವರ ಮೃತದೇಹವನ್ನು ಸಂಜೆ 6 ಗಂಟೆಗೆ ಕಾಶ್ಮೀರದಿಂದ ಹೊರಟು ಬೆಂಗಳೂರು ಮೂಲಕ ಶಿವಮೊಗ್ಗಕ್ಕೆ ಹಾರಲಿದೆ, ಭರತ್ ಅವರ ಮೃತದೇಹಗಳನ್ನು ಮುಂಬೈ ಮೂಲಕ ಬೆಂಗಳೂರಿಗೆ ಕೊಂಡೊಯ್ಯಲಾಗುವುದು. ಈ ವಿಮಾನ ಇಂದು ಮಧ್ಯಾಹ್ನ 3 ಗಂಟೆಗೆ ಕಾಶ್ಮೀರದಿಂದ ಹೊರಡಲಿದೆ.

ಇನ್ನು ಗಾಯಗೊಂಡವರ ಯೋಗ ಕ್ಷೇಮ ವಿಚಾರಿಸಿಲು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರ ಪಹಲ್ಗಾಮ್‌ಗೆ ತೆರಳಿದ್ದಾರೆ. ಆಸ್ಪತ್ರೆಗೆ ತೆರಳಿರುವ ಅವರು ಕನ್ನಡಿಗರಿಗನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಈ ನಡುವೆ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಹೆಲ್ಪ್‌ಲೈನ್ ಆರಂಭಿಸಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ Tour Operators & Travel Agents ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಕೆಳಕಂಡ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನುಸಹಾಯವಾಣಿಗೆ ನೀಡಬೇಕೆಂದು ಸರ್ಕಾರ ಕೋರಿದೆ.

ಹೆಲ್ಪ್‌ಲೈನ್ ನಂಬರ್ ಹೀಗಿದೆ

080-43344334

080-43344335

080-43344336

080-43344342

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT