ಮೃತ ಮಂಜುನಾಥ್ ಕುಟುಂಬ 
ರಾಜ್ಯ

ನಿಮ್ಮೊಂದಿಗೆ ನಾವಿದ್ದೇವೆ: ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿ.ಕೆ ಶಿವಕುಮಾರ್ ಸಾಂತ್ವನ

ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಸ್ಥೈರ್ಯ ತುಂಬಿದರು.

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು.

ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ ಬೆಳಗ್ಗೆ ದೂರವಾಣಿ ಮೂಲಕ ಸಂಪರ್ಕಿಸಿದ ಡಿಸಿಎಂ ಅವರು, "ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ" ಎಂದು ಸ್ಥೈರ್ಯ ತುಂಬಿದರು.

ಇದೇ ವೇಳೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಪ್ರತಿನಿಧಿಗಳ ಜತೆಯೂ ದೂರವಾಣಿ ಕರೆ ಮಾಡಿ ಮಾತನಾಡಿ, "ಮಂಜುನಾಥ್ ಕುಟುಂಬ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ಸಾಂತ್ವನ ತಿಳಿಸಿ" ಎಂದು ಸೂಚಿಸಿದರು.

ಇನ್ನೂ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ನಿಂದ ಹಲ್ಲೆಗೆ ಒಳಗಾಗಿರುವ ಕನ್ನಡಿಗ ವಿಕಾಸ್ ಕುಮಾರ್ ಅವರ ಜತೆಗೂ ಇದೇ ವೇಳೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ಧೈರ್ಯ ತುಂಬಿದರು. ಈ ಪ್ರಕರಣದಲ್ಲಿ ನ್ಯಾಯ ಸಿಗುವಂತೆ ಮಾಡಲಾಗುವುದು, ಯಾವುದಕ್ಕೂ ಹೆದರುವ ಅಗತ್ಯವಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!