ಸಚಿವ ಸಂಪುಟ ಸಭೆ 
ರಾಜ್ಯ

ಪಹಲ್ಗಾಮ್ ಉಗ್ರ ದಾಳಿ ಖಂಡಿಸಿ ಸಚಿವ ಸಂಪುಟ ನಿರ್ಣಯ ಅಂಗೀಕಾರ; ಗುಪ್ತಚರ ಇಲಾಖೆ ವೈಫಲ್ಯ, ತನಿಖೆಗೆ ಆಗ್ರಹ

ಪುಲ್ವಾಮಾದಿಂದ ಪಹಲ್ಗಾಮ್ ವರೆಗಿನ ಈ ಘೋರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ನಿರ್ಣಯವು ಹೇಳಿದೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ, ಕೇಂದ್ರ ಗೃಹ ಸಚಿವಾಲಯ ಮತ್ತು ಗುಪ್ತಚರ ಇಲಾಖೆ ಉಗ್ರರ ದಾಳಿ ತಡೆಯುವಲ್ಲಿ "ವಿಫಲವಾಗಿವೆ" ಎಂದು ಆರೋಪಿಸಿದೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸುವಂತೆಯೂ ಆಗ್ರಹಿಸಿದೆ.

ಮಂಗಳವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ ಕನಿಷ್ಠ 26 ಜನ ಸಾವನ್ನಪ್ಪಿದ್ದಾರೆ.

"ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಕರ್ನಾಟಕದ ಜನರ ಪರವಾಗಿ ಮೃತರ ಕುಟುಂಬಗಳಿಗೆ ನಾವು ಹೃತ್ಪೂರ್ವಕ ಸಂತಾಪ ಸೂಚಿಸುತ್ತೇವೆ" ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಭಯೋತ್ಪಾದಕ ದಾಳಿಗಳು ಮಾನವೀಯತೆಯ ವಿರುದ್ಧದ ಘೋರ ಅಪರಾಧಗಳು ಎಂದು ಟೀಕಿಸಲಾಗಿದೆ ಮತ್ತು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಹೋರಾಟದಲ್ಲಿ ದೇಶ ಒಗ್ಗಟ್ಟಾಗಬೇಕೆಂದು ಒತ್ತಾಯಿಸಿದೆ.

"ಆದಾಗ್ಯೂ, ಪುಲ್ವಾಮಾದಿಂದ ಪಹಲ್ಗಾಮ್ ವರೆಗಿನ ಈ ಘೋರ ದಾಳಿಗಳಿಗೆ ಕೇಂದ್ರ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ನಿರ್ಣಯವು ಹೇಳಿದೆ. ಗುಪ್ತಚರ ಇಲಾಖೆಯು ತನ್ನ ದೌರ್ಬಲ್ಯ ಮತ್ತು ವೈಫಲ್ಯಗಳಿಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ನಾಚಿಕೆಯಿಂದ ತಲೆ ತಗ್ಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ." "ಇದಲ್ಲದೆ, ನೂರಾರು ಕುಟುಂಬಗಳು ಅನಾಥವಾಗಿವೆ. ಕರ್ನಾಟಕ ಸರ್ಕಾರವು ಗೃಹ ಸಚಿವಾಲಯದ ಈ ವೈಫಲ್ಯವನ್ನು ಬಲವಾಗಿ ಖಂಡಿಸುತ್ತದೆ" ಎಂದು ನಿರ್ಣಯ ಹೇಳಿದೆ.

"ಕೋಮು ಧ್ರುವೀಕರಣದ ದುಷ್ಟ ರಾಜಕೀಯ"ಕ್ಕಾಗಿ ಮುಗ್ಧ ನಾಗರಿಕರ ಮೇಲೆ ಭಯೋತ್ಪಾದಕ ದಾಳಿ ಬಳಸುವುದನ್ನು ಸಚಿವ ಸಂಪುಟ ಖಂಡಿಸಿದೆ ಮತ್ತು ವೈಫಲ್ಯಗಳ ಬಗ್ಗೆ ಸಂಪೂರ್ಣ ತನಿಖೆಗೆ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT