ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ 
ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ; 3,647 ಕೋಟಿ ರೂ ಯೋಜನೆಗಳಿಗೆ ಅನುಮೋದನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಂಪುಟ ಸಭೆ ಖಂಡಿಸಿದೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದೆ ಎಂದು ಸಿಎಂ ತಿಳಿಸಿದರು.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಪ್ರಾದೇಶಿಕ ವಿಭಾಗದಲ್ಲಿ 3,647 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ನಾಲ್ಕು ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಂಪುಟ ಸಭೆ ಖಂಡಿಸಿದೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದೆ ಎಂದು ಸಿಎಂ ತಿಳಿಸಿದರು.

ಸಭೆಯಲ್ಲಿ 78 ವಿಷಯಗಳ ಕುರಿತು ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

"ಇಂದು, ನಾನು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದೆ. ಕರ್ನಾಟಕದ ನಾಲ್ಕು ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಲು ನಾವು ನಿರ್ಧರಿಸಿದ್ದೇವೆ. ಇದಕ್ಕೂ ಮೊದಲು, ಕಲಬುರಗಿ ಪ್ರದೇಶದಲ್ಲಿ ಸಭೆ ನಡೆದಿತ್ತು; ಇಂದು, ಮೈಸೂರು ಪ್ರದೇಶದಲ್ಲಿ ನಡೆದಿದ್ದು, ಮುಂಬರುವ ಸಭೆಗಳು ಬೆಳಗಾವಿ ಮತ್ತು ಬಿಜಾಪುರದಲ್ಲಿ ಹಾಗೂ ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಮತ್ತು ಆಯಾ ಪ್ರದೇಶಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಇಂದು ನಡೆದ ಸಭೆಯಲ್ಲಿ 1,787 ಕೋಟಿ ರೂ.ಗಳ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಆರೋಗ್ಯ ಕ್ಷೇತ್ರದ ಸುಧಾರಣೆಗೆ 228 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು, ಕೊಳ್ಳೇಗಾಲದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸಲು 475 ಕೋಟಿ ವೆಚ್ಚಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ ಹಾಗೂ ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

"ಪ್ರವಾಸೋದ್ಯಮಕ್ಕೆ 300 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಹನೂರಿನಲ್ಲಿ ತಾಲೂಕು ಕಟ್ಟಡ ಮತ್ತು 50 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು. ಚಾಮರಾಜನಗರ ಜಿಲ್ಲೆಯ ಚಿಕ್ಕಲೂರು, ಕೊಳ್ಳೇಗಾಲದಲ್ಲಿ, ಮಾಂಟೇಶ್ವರಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಪ್ರಾಧಿಕಾರಗಳ ಸ್ಥಾಪನೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೈಸೂರಿನ ಇಲವಾಲದಲ್ಲಿ ಕ್ರಿಕೆಟ್ ಕ್ರೀಡಾಂಗಣಕ್ಕಾಗಿ ಸ್ಥಳ ಹಂಚಿಕೆ ಮಾಡಲಾಗುವುದು" ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT