ಸಿದ್ದರಾಮಯ್ಯ 
ರಾಜ್ಯ

Pahalgam terror attack: ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸೂಚನೆ- ಸಿದ್ದರಾಮಯ್ಯ

ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ವಿದೇಶಿಗಳು ಸೇರಿ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಚಾಮರಾಜನಗರ: ಭಾರತದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ನಿಗಾ ವಹಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ವಿದೇಶಿಗಳು ಸೇರಿ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಉಗ್ರರು ನಡೆಸಿದ ಈ ದಾಳಿಯು, 2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ಮಲೆ ಮಹದೇಶ್ವರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಉಗ್ರರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಪಹಲ್ಗಾಮ್ ಘಟನೆ ಅತ್ಯಂತ ಹೇಯ ಹಾಗೂ ಅಮಾನುಷವಾದುದ್ದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು ಎಂದಿದ್ದಾರೆ.

ಪುಲ್ವಾಮಾದಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲ ಸಹಕಾರ, ಬೆಂಬಲವನ್ನು ನಾವು ನೀಡುತ್ತೇವೆ ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರ ಸರ್ಕಾರ ಅಗತ್ಯ ಅನುಮೋದನೆಗಳನ್ನು ನೀಡಿದ ತಕ್ಷಣ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ತಮ್ಮ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.

'ನಾವು ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಅದನ್ನು ಅನುಮೋದಿಸಬೇಕು. ಅನುಮೋದನೆ ಸಿಕ್ಕರೆ, ನಾಳೆಯೇ ಅನುಷ್ಠಾನವನ್ನು ಪ್ರಾರಂಭಿಸುತ್ತೇವೆ. ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ' ಎಂದು ಹೇಳಿದರು.

ಮೇಕೆದಾಟು ಯೋಜನೆಯು ಕರ್ನಾಟಕ ಪ್ರಸ್ತಾಪಿಸಿದ ಬಹುಪಯೋಗಿ (ಕುಡಿಯುವ ನೀರು ಮತ್ತು ವಿದ್ಯುತ್) ಯೋಜನೆಯಾಗಿದೆ. ಇದು ರಾಮನಗರ ಜಿಲ್ಲೆಯ ಕನಕಪುರ ಬಳಿ 67.16 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯವನ್ನು ನಿರ್ಮಿಸುವುದನ್ನು ಒಳಗೊಂಡಿದೆ.

ರಾಜ್ಯದ ನೀರಿನ ಹಂಚಿಕೆಯ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳವನ್ನು ಉಲ್ಲೇಖಿಸಿ ತಮಿಳುನಾಡು ಈ ಯೋಜನೆಯನ್ನು ವಿರೋಧಿಸಿದೆ.

ಕರ್ನಾಟಕ ಅಧಿಕಾರಿಗಳ ಪ್ರಕಾರ, ಈ ಯೋಜನೆ ಪೂರ್ಣಗೊಂಡ ನಂತರ, ಬೆಂಗಳೂರು ಮತ್ತು ಹತ್ತಿರದ ಪ್ರದೇಶಗಳಿಗೆ 4.75 ಟಿಎಂಸಿ ಅಡಿ ಕುಡಿಯುವ ನೀರನ್ನು ಪೂರೈಸುವ ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿದೆ.

ಕೇಂದ್ರವು ರಾಜ್ಯದ ಪಾಲಿನ ಹಣವನ್ನು ಹೆಚ್ಚಾಗಿ ತಡೆಹಿಡಿಯುತ್ತದೆ ಎಂದು ಆರೋಪಿಸಿದ ಸಿಎಂ, ಘೋಷಿಸಿದ ಅನುದಾನವನ್ನು ಸಹ ಬಿಡುಗಡೆ ಮಾಡುತ್ತಿಲ್ಲ ಎಂದು ಹೇಳಿದರು.

'2023-24ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಘೋಷಿಸಲಾಗಿತ್ತು. ಆದರೆ, ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಇದನ್ನು ಘೋಷಿಸಿದ್ದರು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT