ಮಣಿವಣ್ಣನ್ ಮತ್ತು ಮಹೇಶ್ವರ್ ರಾವ್ 
ರಾಜ್ಯ

ಬಿಬಿಎಂಪಿಗೆ ಹೊಸ ಮುಖ್ಯ ಆಯುಕ್ತರ ನೇಮಕ: ರೇಸ್ ನಲ್ಲಿ ಮಣಿವಣ್ಣನ್-ಮಹೇಶ್ವರ್ ರಾವ್; 'ಡೆಮಾಲಿಷನ್ ಮ್ಯಾನ್'ಗೆ ಹುದ್ದೆ ಸಾಧ್ಯತೆ?

ಮಣಿವಣ್ಣನ್ ಈಗ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ಮಹೇಶ್ವರ್ ರಾವ್ ಬೆಂಗಳೂರು ಮೆಟ್ರೋಪಾಲಿಟನ್ ರೈಲು ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ನಿರೀಕ್ಷೆಯಿರುವುದರಿಂದ, ರಾಜ್ಯದ ಅತ್ಯಂತ ಶ್ರೀಮಂತ ಮತ್ತು ದೊಡ್ಡ ನಾಗರಿಕ ಸಂಸ್ಥೆಗೆ ಮುಂದಿನ ಆಯುಕ್ತರಾಗಿ ಯಾರು ನೇಮಕಗೊಳ್ಳಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.

ಮೂಲಗಳ ಪ್ರಕಾರ, ಹಿರಿಯ ಐಎಎಸ್ ಅಧಿಕಾರಿಗಳಾದ ಪಿ ಮಣಿವಣ್ಣನ್ ಮತ್ತು ಮಹೇಶ್ವರ್ ರಾವ್ ಅವರು ಈ ಪ್ರತಿಷ್ಠಿತ ಹುದ್ದೆಗೆ ಪ್ರಮುಖ ಸ್ಪರ್ಧಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಮಣಿವಣ್ಣನ್ ಈಗ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ಮಹೇಶ್ವರ್ ರಾವ್ ಬೆಂಗಳೂರು ಮೆಟ್ರೋಪಾಲಿಟನ್ ರೈಲು ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಮಣಿವಣ್ಣನ್ ತಮ್ಮ ಉತ್ತಮ ಕೆಲಸಕ್ಕೆ ಹೆಸರುವಾಸಿಯಾಗಿದ್ದಾರೆ. ಒತ್ತುವರಿಗಳನ್ನು ತೆರವುಗೊಳಿಸುವ ಮೂಲಕ ಅವರು 'ಡೆಮಾಲಿಷನ್ ಮ್ಯಾನ್' ಎಂಬ ಬಿರುದನ್ನು ಗಳಿಸಿದ್ದಾರೆ. ಮಣಿವಣ್ಣನ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮೈಸೂರು ನಗರ ನಿಗಮದ ಆಯುಕ್ತರಾಗಿದ್ದರು.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಮ್) ನಲ್ಲಿನ ಅನುಭವದೊಂದಿಗೆ ಅವರು ಬೆಂಗಳೂರು ನಗರ ಆಡಳಿತದ ಬಗ್ಗೆ ಉತ್ತಮ ಜ್ಞಾನ ಹೊಂದಿದ್ದಾರೆ, ಆದ್ದರಿಂದ, ಮಣಿವಣ್ಣನ್ ಅವರನ್ನು ಈ ಪ್ರತಿಷ್ಠಿತ ಹುದ್ದೆಗೆ ಆಯ್ಕೆ ಮಾಡಬಹುದು" ಎಂದು ಮೂಲಗಳು ತಿಳಿಸಿವೆ.

ಮಹೇಶ್ವರ್ ರಾವ್ 2018 ರಲ್ಲಿ ಬಿಬಿಎಂಪಿ ಆಯುಕ್ತರಾಗಿ ಸೇವೆ ಸಲ್ಲಿಸಿದರು. ಅವರು ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಅವರು ಕಾರ್ಮಿಕ ಇಲಾಖೆಯಲ್ಲಿದ್ದರು. ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಡಿಸಿ ಆಗಿ ಸೇವೆ ಸಲ್ಲಿಸಿದ್ದಾರೆ.

ಇವರಲ್ಲಿ ಯಾರನ್ನಾದರೂ ನೇಮಿಸುವಲ್ಲಿ ವಿಳಂಬವಾದರೆ, ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ಉಸ್ತುವಾರಿ ಮುಖ್ಯ ಆಯುಕ್ತರನ್ನಾಗಿ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 30 ರಂದು, ನಗರಾಭಿವೃದ್ಧಿ ಅಭಿವೃದ್ಧಿ (ಯುಡಿಡಿ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಎಸ್.ಆರ್. ಉಮಾಶಂಕರ್ ನಿವೃತ್ತರಾಗಲಿದ್ದಾರೆ ಮತ್ತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಯುಡಿಡಿಯ ಎಸಿಎಸ್ ಆಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT