ಎಂ. ಲಕ್ಷ್ಮಣ್ 
ರಾಜ್ಯ

'ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ; 4 ಮರಕ್ಕೆ ಗುಂಡು ಹಾರಿಸಿ, ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ಬಿಂಬಿಸಿತ್ತು'

ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.

ಮೈಸೂರು: ಪಹಲ್ಗಾಮ್‌ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದು ಕಿಡಿರಕಾರಿದರು.

ನಾಲ್ಕು ಮರಗಳಿಗೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್‌ ಎಂದು ಬಿಜೆಪಿ ಬಿಂಬಿಸಿತ್ತು, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT