ಉಗ್ರರ ದಾಳಿಗೆ ಬಲಿಯಾದ ವ್ಯಕ್ತಿ ಭರತ್ ಭೂಷಣ್ ಹಾಗೂ ಅವರ ಕುಟುಂಬ. 
ರಾಜ್ಯ

'ನಾವಿಲ್ಲಿ ಕಷ್ಟದಲ್ಲಿರುವಾಗ ನೀವೇಗೆ ಸಂಭ್ರಮಿಸಲು ಸಾಧ್ಯ': 3 ವರ್ಷದ ಮಗುವಿದೆ ಎಂದು ಅಂಗಲಾಚಿದರೂ ಗುಂಡು ಹೊಡೆದೇ ಬಿಟ್ಟರು...!

ನನಗೆ ಮಗುವಿದೆ, ದಯವಿಟ್ಟು ಗುಂಡು ಹಾರಿಸಬೇಡಿ ಎಂದು ಹೇಳಿದರು. ಮಗುವನ್ನೂ ಕೂಡ ತೋರಿಸಿದರು. ಆದರೆ, ಭಯೋತ್ಪಾದಕ ಭರತ್ ತಲೆಗೆ ಎರಡು ಬಾರಿ ಗುಂಡು ಹಾರಿಸಿದ.

ಬೆಂಗಳೂರು: 3 ವರ್ಷದ ಮಗುವಿದೆ ನಮ್ಮನ್ನು ಬಿಟ್ಟುಬಿಡಿ ಎಂದು ಅಂಗಲಾಚಿದರೂ ಕಿವಿಗೊಡದ ಉಗ್ರರು, ನಾವಿಲ್ಲಿ ಕಷ್ಟದಲ್ಲಿದ್ದೇವೆ. ನೀವು ಹೇಗೆ ಸಂಭ್ರಸಲು ಬಿಡುತ್ತೇವೆಂದು ಪತಿಗೆ ಗುಂಡು ಹೊಡೆದೇ ಬಿಟ್ಟರು ಎಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭರತ್ ಅವರ ಪತ್ನಿ ಡಾ. ಸುಜಾತಾ ಅವರು ಕಣ್ಣೀರಿಟ್ಟಿದ್ದಾರೆ.

ಏಪ್ರಿಲ್ 18 ರಂದು ಕುಟುಂಬವು ಬೆಂಗಳೂರಿನಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿತ್ತು. ಭಯೋತ್ಪಾದಕ ದಾಳಿಯ ದಿನವನ್ನು ಸುಜಾತಾ ಅವರು ಸ್ಮರಿಸಿದ್ದು, ಪತಿಯ ನೆನೆದು ಕಣ್ಣೀರಿಟ್ಟಿದ್ದಾರೆ.

ನಾವು ಮಂಗಳವಾರ ಬೆಳಿಗ್ಗೆ ಪಹಲ್ಗಾಮ್‌ಗೆ ಹೋಗಿದ್ದೆವು. ಅಲ್ಲಿಂದ ನಾವು ಪೈನ್ ಮರಗಳಿಂದ ಆವೃತವಾದ ಬೈಸರನ್ ಎಂಬ ದೊಡ್ಡ ಹುಲ್ಲುಗಾವಲು ತಲುಪಿದೆವು. ಅದು ಮಿನಿ ಸ್ವಿಟ್ಜರ್‌ಲ್ಯಾಂಡ್‌ನಂತೆ ಕಾಣುತ್ತಿತ್ತು. ಪ್ರವಾಸಿಗರು ಸಾಂಪ್ರದಾಯಿಕ ಕಾಶ್ಮೀರಿ ಉಡುಪನ್ನು ಧರಿಸಿ ಫೋಟೋಗಳನ್ನು ತೆಗೆದುಕೊಳ್ಳಲು ಹಲವಾರು ಟೆಂಟ್ ಗಳಿದ್ದವು. ಮಧ್ಯಾಹ್ನ 1.30 ಆಗಿದ್ದರಿಂದ ಹಸಿವಾಗಿತ್ತು. ಹೀಗಾಗಿ ಹಿಂತಿರುಗಲು ನಿರ್ಧರಿಸಿದ್ದೆವು. ಈ ವಏಳೆ ಇದ್ದಕ್ಕಿದ್ದಂತೆ ಗುಂಡಿನ ಮೊರೆತದ ಶಬ್ಧ ಕೇಳಿಸಲು ಆರಂಬವಾಯಿತು. ಮೊದಲಿಗೆ ಪಟಾಕಿ ಶಬ್ಧವಿರಬೇಕು, ಕಾಡು ಪ್ರಾಣಿಗಳ ಹೆದರಿಸಲು ಸಿಡಿಸುತ್ತಿರಬಹುದು ಎಂದೇ ಎಲ್ಲರೂ ಭಾವಿಸಿದ್ದೆವು. ಆದರೆ, ಶಬ್ಧ ತೀವ್ರಗೊಳ್ಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಳಿಕ ದಾಳಿ ನಡೆಸಲಾಗಿದೆ ಎಂಬುದು ನಮಗೆ ತಿಳಿಯಿತು. ಅಡಗಿಕೊಳ್ಳಲು ಟೆಂಟ್ ಕಡೆಗೆ ಓಡಿದೆವು.

ನಮ್ಮಿಂದ ಸುಮಾರು 500 ಮೀಟರ್ ದೂರದಲ್ಲಿ ಮತ್ತೊಂದು ಜೋಡಿಯಿತ್ತು. ಅಲ್ಲಿ ಒಬ್ಬ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿದರು. ಕೆಲವು ಕ್ಷಣಗಳ ನಂತರ ಓರ್ವ ಭಯೋತ್ಪಾದಕ ನನ್ನ ಗಂಡನ ಹಿಂದೆ ನಿಂತನು. ಭರತ್ ನನಗೆ 'ಚಿಂತಿಸಬೇಡಿ. ಶಾಂತವಾಗಿರಿ ಎಂದು ಹೇಳುತ್ತಲೇ ಇದ್ದರು. ಅವರು ನಮ್ಮನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದರು.

ನನಗೆ ಮಗುವಿದೆ, ದಯವಿಟ್ಟು ಗುಂಡು ಹಾರಿಸಬೇಡಿ' ಎಂದು ಹೇಳಿದರು. ನಮ್ಮ ಮಗನನ್ನು ಸಹ ತೋರಿಸಿದನರು. ಆದರೆ, ಭಯೋತ್ಪಾದಕ ಭರತ್ ತಲೆಗೆ ಎರಡು ಬಾರಿ ಗುಂಡು ಹಾರಿಸಿದ. ನನ್ನ ಪತಿ ನಮ್ಮ ಕಣ್ಣ ಮುಂದೆಯೇ ನೆಲಕ್ಕುರುಳಿದರು. ನಾವಿಲ್ಲಿ ಕಷ್ಟದಲ್ಲಿರುವಾಗ ನೀವು ಹೇಗೆ ಸಂಭ್ರಮಿಸುತ್ತೀರಿ? ನೀವು ಇಲ್ಲಿಗೆ ಆನಂದಿಸಲು ಬಂದಿದ್ದೀರಿ ಎಂದು ಭಯೋತ್ಪಾದಕ ಹೇಳಿದ್ದು ನನಗೆ ಕೇಳಿಸಿತು ಎಂದು ಸುಜಾತಾ ಅವರು ಹೇಳಿದ್ದಾರೆ.

ನಾವು ಎಲ್ಲಿಂದ ಬಂದವರು ಅಥವಾ ಯಾವ ಧರ್ಮಕ್ಕೆ ಸೇರಿದವರು ಎಂದು ಭಯೋತ್ಪಾದಕ ಕೇಳಲಿಲ್ಲ. ಅವನು ನನ್ನ ಗಂಡನಿಗೆ ಗುಂಡು ಹಾರಿಸಿದನು. ಪತಿ ನೆಲಕ್ಕುರುಳುತ್ತಿದ್ದಂತೆಯೇ ಮಗನನ್ನು ಉಳಿಸಿಕೊಳ್ಳಲು ಪತಿಯ ಜೇಬಿನಲ್ಲಿದ್ದ ದಾಖಲೆಗಳು ಮತ್ತು ಮೊಬೈಲ್ ಫೋನ್ ತೆಗೆದುಕೊಂಡು ಓಡಿಹೋದೆ. ನಮ್ಮ ಸುತ್ತಲೂ ಗುಂಡಿನ ಮೊರೆತದ ಶಬ್ಧ ಕೇಳಿಸುತ್ತಲೇ ಇತ್ತು. ಎಲ್ಲಿ ನೋಡಿದರೂ ಶವಗಳು ಬಿದ್ದಿರುವುದು ಕಂಡು ಬರುತ್ತಿತ್ತು. ನಾವು ಮೂವರು ಭಯೋತ್ಪಾದಕರನ್ನು ನೋಡಿದ್ದೇನೆ. ಪಹಲ್ಗಾಮ್ ಪಟ್ಟಣದಲ್ಲಿ ಭಾರೀ ಭದ್ರತೆ ಇತ್ತು, ಆದರೆ ಬೆಟ್ಟದ ತುದಿಯಲ್ಲಿರುವ ಬೈಸರನ್‌ನಲ್ಲಿ ಯಾವುದೇ ಭದ್ರತೆ ಇರಲಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT