ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ

ಯುವ ಕಾಂಗ್ರೆಸ್ ಆಯೋಜಿಸಿದ್ದ 'ಯುವ ಕ್ರಾಂತಿ' ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ ಎಂದರು.

ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ 'ಯುವ ಕ್ರಾಂತಿ' ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ.ಆದರೆ ಈಗ ಇವರು ನಮಗೆ ದೇಶ ಭಕ್ತಿ ಬಗ್ಗೆ ಮಾತನಾಡುತ್ತಾರೆ ಎಂದರು.

ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಒಡೆಯಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ತಿಳಿಸಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್.ಎಸ್.ಎಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಿಷ್ಣುತೆ ಹಾಗೂ ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ ಎಂದರು.

"ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು" ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ದೊರೆತದ್ದು ಸಾರ್ಥಕ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದು ತಿಳಿಸಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರವಿರಲಿ.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ. ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಇಂಥಾ ವಿಷಯಗಳಲ್ಲಿ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಎತ್ತಿ ಹಿಡಿದು, ಇದು ಸಂವಿಧಾನ ಬದ್ಧವಾಗಿದೆ ಎಂದು ಹೇಳಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ತಿಳಿಸಿದರು.

ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT