ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತೋಟದ ಮನೆಯಲ್ಲಿ ಯುವ ವಕೀಲೆ ಜೊತೆಗೆ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್‌ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಂಗಳೂರು: ನೆಲಮಂಗಲ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸಪುರದಲ್ಲಿರುವ ತೋಟದ ಮನೆಯಲ್ಲಿ ವಕೀಲೆ ಹಾಗೂ ಯುವಕನ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡತೊಡಗಿವೆ.

ಮೃತರನ್ನು ವಕೀಲೆ ರಮ್ಯಾ(27) ಹಾಗೂ ಪುನೀತ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಸೀಲಿಂಗ್‌ ಫ್ಯಾನ್'ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಗುರುವಾರ ಸಂಜೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾವು ಹಲವು ಅನುಮಾನಗಳಿಗೆ ಎಡೆಮಾಟಿಕೊಟ್ಟಿದೆ.

ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಲವು ಆಯಾಮಾಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ಇನ್ನು ವಕೀಲೆ ರಮ್ಯ ಮನೆಯಲ್ಲಿ ವಾಸವಿದ್ದ ಪುನೀತ್ ಎಂಬಾತನ ಮೃತದೇಹ ಕೆಂಪಲಿಂಗನಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿಗೆ ಕಾರಣ‌ ನಿಗೂಢವಾಗಿದೆ. ಮರಣೋತ್ತರ ಪರೀಕ್ಣೆಗೆ ಮೃತ ದೇಹ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಮ್ಯಾ ಸಾವಿನ ಸುತ್ತಲೂ ಅನುಮಾನಗಳು ಹುಟ್ಟಿಕೊಂಡಿದ್ದು, ಕುಟುಂಬಸ್ಥರು ಉದ್ಯಮಿ ದಿನೇಶ್ ಎಂಬಾತನ ಮೇಲೆ ಅನುಮಾನ ವ್ತಕ್ತಪಡಿಸಿದ್ದಾರೆ.

ಸದ್ಯ ಪೊಲೀಸರು ಕುಟುಂಬಸ್ಥರ ದೂರಿನ ಮೇರೆಗೆ ಕೊಲೆ ಆರೋಪದ (103) ಅಡಿ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

"ರಮ್ಯಾ ಅವರ ಸಾವು ಉದ್ಯಮಿಯೊಂದಿಗಿನ ವೈಯಕ್ತಿಕ ಸಮಸ್ಯೆಗಳಿಂದಾಗಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ. ಆದರೆ ಪುನೀತ್ ರಮ್ಯಾ ಅವರ ಸಾವಿನ ನೋವು ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ರಮ್ಯಾ ಹಾಗೂ ಉದ್ಯಮಿ ನಡುವಿನ ಸಮಸ್ಯೆ ಬಗ್ಗೆ ಪುನೀತ್ ಗೆ ತಿಳಿದಿದ್ದ ಕಾರಣಕ್ಕೆ ಕೊಲೆ ಮಾಡಿರಬಹುದು ಎಂಬ ಅನುಮಾನಗಳೂ ವ್ಯಕ್ತವಾಗಿವೆ. ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ ಇಂಡಿ ಕೂಟಕ್ಕೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

J-K terrorists shift: ಸ್ಥಳೀಯರಿಂದ ಸಿಗದ ಬೆಂಬಲ, ಅರಣ್ಯ 'ಬಂಕರ್' ಗಳಿಗೆ ಉಗ್ರರ ಸ್ಥಳಾಂತರ! ಭಾರತೀಯ ಸೇನೆಗೆ ಹೊಸ ಸವಾಲು

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

SCROLL FOR NEXT