ಪರಿಹಾರ ಚೆಕ್ ವಿತರಿಸುತ್ತಿರುವ ಸಚಿವ ರಾಮಲಿಂಗಾರೆಡ್ಡಿ. 
ರಾಜ್ಯ

KSRTC: ಅಪಘಾತದಲ್ಲಿ ಮೃತಪಟ್ಟ ಚಾಲಕರ ಕುಟುಂಬಸ್ಥರಿಗೆ ತಲಾ 1 ಕೋಟಿ ರೂ ಹಸ್ತಾಂತರ

ನಾಲ್ಕು ನಿಗಮಗಳಲ್ಲಿ 1,000 ಸಿಬ್ಬಂದಿಗಳ ಕುಟುಂಬಸ್ಥರಿಗೆ ಅನುಕಂಪದ ಆಧಾರದ ಮೇಲೆ ಪರಿಹಾರ ನೀಡಲಾಗಿದೆ

ಬೆಂಗಳೂರು: ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಾಳುಗಳ ಕುಟುಂಬಸ್ಥರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಶನಿವಾರ ಪರಿಹಾರವನ್ನು ಹಸ್ತಾಂತರಿಸಿದೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಕೆಎಸ್‌ಆರ್‌ಟಿಸಿ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಅವರು, ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡಿದ್ದ ಸಿಬ್ಬಂದಿಗಳ ಕುಟುಂಬಸ್ಥರಿಗೆ ಪರಿಹಾರದ ಚೆಕ್ ಗಳನ್ನು ವಿತರಿಸಿದರು.

ಹಗಲಿರುಳು ಕೆಲಸ ಮಾಡುವ ಸಿಬ್ಬಂದಿಯಿಂದಾಗಿ ಬಸ್ ನಿಗಮ ಇಂದು ಉತ್ತಮ ಸ್ಥಿತಿಯಲ್ಲಿದೆ. ಮೃತ ನೌಕರರ ಕುಟುಂಬಗಳನ್ನು ನೋಡಿಕೊಳ್ಳುವುದು ನಿಗಮದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ, ನಾಲ್ಕು ನಿಗಮಗಳಲ್ಲಿ 1,000 ಸಿಬ್ಬಂದಿಗಳ ಕುಟುಂಬಸ್ಥರಿಗೆ ಅನುಕಂಪದ ಆಧಾರದ ಮೇಲೆ ಪರಿಹಾರ ನೀಡಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿಯವರು ಹೇಳಿದ್ದಾರೆ.

ಅಪಘಾತದಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವನ ಹೇಳಿ, ನಿಗಮದ ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಸಿಬ್ಬಂದಿಗಳ ಅವಲಂಬಿತರಿಗೆ ಪರಿಹಾರ ಮೊತ್ತದ ಚೆಕ್‌ ಅನ್ನು ವಿತರಿಸಲಾಗಿದೆ. ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗ ಅರಕಲಗೂಡು ಘಟಕದ ಚಾಲಕ-ಕಂ-ನಿರ್ವಾಹಕ ಸುನಿಲ್ ಕುಮಾರ್ ಬಿ ಡಿ ಅವರಿಗೆ ರೂ.25 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ, ಅವರಿಗೆ 2024ರ ಮಾರ್ಚ್ 25ರಿಂದ ಡಿಸೆಂಬರ್ 09ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐಒಡಿ ನೀಡಲಾಗಿದೆ.

ಸಾರಿಗೆ ಸಿಬ್ಬಂದಿಗಳು ಹಗಲು, ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಮೃತ ಸಿಬ್ಬಂದಿಗಳ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಲಾಗಿದೆ.

ಇಂದು ವಿತರಿಸಲಾಗಿರುವ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭಕಾರ್ಯಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡಬಾರದು. ಹಣವಿದ್ದರೆ ಎಲ್ಲರೂ ನೆಂಟರೆ, ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಬೇಕು.

ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ 'ಕೆಎಸ್‌ಆರ್‌ಟಿಸಿ ಆರೋಗ್ಯ' ಯೋಜನೆಯನ್ನೂ ಕೂಡ ಜಾರಿಗೆ ತಂದಿದ್ದು, ರಾಜ್ಯಾದ್ಯಂತ 300ಕ್ಕೂ ಅಧಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದೆ. ಈವರೆಗೂ 56,000ಕ್ಕೂ ಅಧಿಕ ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿದ್ದಾರೆ. ಈವರೆಗೂ 24 ಮಂದಿ ನೌಕರರ ಕುಟುಂಬದವರಿಗೆ ತಲಾ ₹1 ಕೋಟಿ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಇಂದು, ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.1 ಕೋಟಿ ಚೆಕ್ ನೀಡಲಾಗಿದ್ದು, ಈವರೆಗೂ 26 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟಾರೆ ರೂ.26 ಕೋಟಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT