ಪಾಕ್ ವಾಹಿನಿಗಳಲ್ಲಿ ಪ್ರಸಾರವಾದ ಸಿದ್ದು ಹೇಳಿಕೆ. 
ರಾಜ್ಯ

'ಯುದ್ಧದ ಅನಿವಾರ್ಯತೆ ಎದುರಾಗಿಲ್ಲ': ಪಾಕ್ ನಲ್ಲಿ ಫೇಮಸ್ ಆಯ್ತು ಸಿದ್ದು ಹೇಳಿಕೆ; ಭಾರತದಲ್ಲಿ ಆಂತರಿಕ ಭಿನ್ನಮತ ಶುರು ಎಂದ ವಾಹಿನಿಗಳು...!

ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಸುದ್ದಿ ಪ್ರಕಟಿಸುತ್ತಿವೆ.

ಬೆಂಗಳೂರು: ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಹಲವು ರಾಜತಾಂತ್ರಿಕ ನಿರ್ಧಾರಗಳನ್ನು ಪ್ರಕಟಿಸಿದ್ದು, ಈ ನಡುವಲ್ಲೇ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುದ್ಧ ಮಾಡುವ ಅನಿವಾರ್ಯತೆ ಇಲ್ಲ, ಕೇಂದ್ರ ಸರ್ಕಾರ ಬಿಗಿ ಭದ್ರತೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು, ರಕ್ಷಣಾ ವ್ವವಸ್ಥೆಯನ್ನು ಸದೃಢಗೊಳಿಸಬೇಕು, ಜನಕ್ಕೆ ಖಂಡಿತವಾಗಿಯೂ ಯುದ್ಧ ಬೇಕಿಲ್ಲ, ಶಾಂತಿ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದ್ದರು.

ಈ ಹೇಳಿಕೆ ಪಾಕಿಸ್ತಾನ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿದ್ದು, ಅಲ್ಲಿನ ಟಿವಿ ಮಾಧ್ಯಮಗಳು ಪದೇ ಪದೇ ಇವರ ಹೇಳಿಕೆಯನ್ನು ತೋರಿಸುತ್ತಾ, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಸುದ್ದಿ ಪ್ರಕಟಿಸುತ್ತಿವೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಪಾಕಿಸ್ತಾನದ ಮೇಲೆ ಯುದ್ಧ ಮಾಡಲು ಸನ್ನದ್ದವಾಗಿದೆ. ಆದರೆ, ಕೇಂದ್ರದ ಈ ನಿರ್ಧಾರಕ್ಕೆ ಭಾರತದೊಳಗೇ ಅಸಮಾಧಾನ ಎದ್ದಿದೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಹಲ್ಗಾಮ್ ನಲ್ಲಿ ಆಗಿರುವ ಘಟನೆಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗೆ ಯುದ್ಧ ಮಾಡುವ ಅವಶ್ಯತೆಯೇನಿಲ್ಲ. ಪಹಲ್ಗಾಮ್ ಘಟನೆ ಭದ್ರತಾ ವೈಫಲ್ಯದಿಂದ ಆಗಿರುವಂಥದ್ದು. ಅದನ್ನು ಈಗಾಗಲೇ ಒಪ್ಪಿಕೊಂಡಿರುವ ಕೇಂದ್ರ ಸರ್ಕಾರ, ಸುಮ್ಮನೇ ಪಾಕಿಸ್ತಾನವನ್ನು ಈ ವಿಚಾರದಲ್ಲಿ ಬಲಿಪಶು ಮಾಡಲು ಹೊರಟಿದೆ ಎಂದು ಹೇಳಿದ್ದಾರೆ ಎಂದು ಬಿತ್ತರಿಸಿದೆ.

ಸಿದ್ದರಾಮಯ್ಯ ಹೇಳಿದ್ದೇನು?

ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅನಿವಾರ್ಯತೆ ಇದೆಯಾ ಎಂದು ಮಾದ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಯುದ್ಧ ಮಾಡುವ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ಇರಬೇಕು, ಜನರಿಗೆ ಭದ್ರತೆ ಇರಬೇಕು ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ವಹಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT