ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ 5 ದಿನ ಗುಡುಗು ಸಹಿತ ಮಳೆ; IMD

ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತ ಪರಿಚಲನೆಯ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯು ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ತಗ್ಗು ಕರ್ನಾಟಕದ ಹವಾಮಾನದ ಮೇಲೆ ಪ್ರಭಾವ ಬೀರುತ್ತಿದೆ. ಉತ್ತರ ಒಳನಾಡು ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಬೆಂಗಳೂರಿನಲ್ಲಿ ಆಹ್ಲಾದಕರ ಹವಾಮಾನವಿರುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 ದಿನ ಮಳೆ

ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಮತ್ತು ಎಚ್ಚರಿಕೆಗಳನ್ನು ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾದ್ಯತೆ ಇದೆ ಎಂದು ಹೇಳಿದೆ. ಅಂತೆಯೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಒಳನಾಡು ಅಂದರೆ ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಕೋಲಾರದ ಮುಳಬಾಗಿಲು, ಬಂಗಾರಪೇಟೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅಂತೆಯೇ ಚಿತ್ರದುರ್ಗದ ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು ಮತ್ತು ಹೊಸದುರ್ಗದಲ್ಲಿ ಚದುರಿದಂತೆ ಮಳೆಯಾಗಲಿದ್ದು, ಚಿತ್ರದುರ್ಗ ನಗರದಲ್ಲಿ ಒಣಹವೆ ಮುಂದುವರೆಯಲಿದೆ ಎನ್ನಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಯಲ್ಲಿ ಸಾಧಾರಣ ಮಳೆ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ

ಇನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಏಪ್ರಿಲ್ 30 ಮತ್ತು ಮೇ 01, 2025 ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT