ಸಾಂದರ್ಭಿಕ ಚಿತ್ರ 
ರಾಜ್ಯ

CET ಪರಿಷ್ಕೃತ ಕೀ ಉತ್ತರ ಪ್ರಕಟ: ಭೌತಶಾಸ್ತ್ರದ ಒಂದು ಪ್ರಶ್ನೆಗೆ ಕೃಪಾಂಕ

ಸಿಇಟಿ ಪರೀಕ್ಷೆ ನಡೆಸಲಾದ 16 ವರ್ಷನ್‌ಗಳ ಪ್ರಶ್ನೆ ಪತ್ರಿಕೆಗೂ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಭೌತಶಾಸ್ತ್ರದ ಒಂದು ಪ್ರಶ್ನೆ ಮಾತ್ರ ಉತ್ತರದ ಆಯ್ಕೆ ಸರಿಯಾಗಿಲ್ಲದ್ದರಿಂದ ಒಂದು ಕೃಪಾಂಕವನನ್ನು ನೀಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2025ರ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸಿಇಟಿ ಪರೀಕ್ಷೆ ನಡೆಸಲಾದ 16 ವರ್ಷನ್‌ಗಳ ಪ್ರಶ್ನೆ ಪತ್ರಿಕೆಗೂ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಭೌತಶಾಸ್ತ್ರದ ಒಂದು ಪ್ರಶ್ನೆ ಮಾತ್ರ ಉತ್ತರದ ಆಯ್ಕೆ ಸರಿಯಾಗಿಲ್ಲದ್ದರಿಂದ ಒಂದು ಕೃಪಾಂಕವನನ್ನು ನೀಡಲಾಗಿದೆ.

ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು ಏ.17ರಂದು ಪರೀಕ್ಷೆಗಳನ್ನು ನಡೆಸಲಾಗಿದೆ. ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಏ.18ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಜೊತೆಗೆ, ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಏ.22ರ ಒಳಗಾಗಿ ಸಲ್ಲಿಕೆ ಮಾಡುವುದಕ್ಕೆ ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಗಳ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಗಳ ಶಿಫಾರಸ್ಸಿನಂತೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಬದಲಾವಣೆಗೊಂಡ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದರಂತೆ ಗಣಿತಶಾಸ್ತ್ರ ವಿಷಯದ ಪ್ರಕಟಿತ ಕೀ ಉತ್ತರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ, ಭೌತಶಾಸ್ತ್ರದ ವಿಷಯದಲ್ಲಿ ಒಂದು ಅಂಕವನ್ನು ಗ್ರೇಸ್ ಅಂಗವಾಗಿ ನಿಡಲಾಗಿದೆ.

ಆಯಾ ವರ್ಷನ್‌ ಕೋಡ್‌ಗೆ ಸಂಬಂಧಿಸಿದಂತೆ 1, 2, 3 ಹಾಗೂ 4ನೇ ಉತ್ತರ ಆಯ್ಕೆ ಮಾಡಿದ್ದರೂ ಅದನ್ನು ಪರಿಗಣನೆ ಮಾಡದೇ ಒಂದು ಗ್ರೇಸ್ ಅಂಕವನ್ನು ಮಕ್ಕಳಿಗಾಗಿ ನೀಡಲಾಗುತ್ತದೆ ಎಂದು ಕೆಇಎ ಹೇಳಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ-2025 ನೇ ಸಾಲಿನ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಏ.15ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.

ಸದರಿ ಪರೀಕ್ಷೆಯ ಅಂಕಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ (https://cetonline.karnataka.gov.in/kea/) ಯುಜಿಸಿಇಟಿ ಮಾಹಿತಿ ಪುಸ್ತಕದಲ್ಲಿ ತಿಳಿಸಿರುವಂತೆ ಏ.15ರಂದು ನಡೆದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾಗಲು ಕನಿಷ್ಠ 12 ಅಂಕಗಳನ್ನು ಗಳಿಸಬೇಕಾಗಿರುತ್ತದೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT