ಸಂಗ್ರಹ ಚಿತ್ರ 
ರಾಜ್ಯ

ರೈಲ್ವೆ ಪರೀಕ್ಷೆಯಲ್ಲೂ ಜನಿವಾರ-ಮಂಗಳಸೂತ್ರ ತೆಗೆಯುವಂತೆ ಸೂಚನೆ: ಸಚಿವ ಸೋಮಣ್ಣ ಮಧ್ಯಪ್ರವೇಶ, ತಣ್ಣಗಾಯ್ತು ವಿವಾದ

ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ಅಧಿಕಾರಿಗಳಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.

ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ವಿವಾದ ಭುಗಿಲೇಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಸಚಿವ ಸೋಮಣ್ಣ ಅವರ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವಿವಾದಕ್ಕೆ ಅಂತ್ಯ ಹಾಡಿದ್ದಾರೆ.

ಸೋಮಣ್ಣ ಅವರ ಸೂಚನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬ್ರಿಜೇಶ್ ಚೌಟ ಅವರು, ‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್​ಟಿಕೆಟ್​ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಹೇಳಿದ್ದಾರೆ.

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30 ರಂದು ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!