ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ) 
ರಾಜ್ಯ

Namma Metro: ಮೆಟ್ರೋ ರೈಲಿನಲ್ಲಿ ಊಟ; ಮಹಿಳಾ ಪ್ರಯಾಣಿಕರಿಗೆ ದಂಡ ವಿಧಿಸಿದ BMRCL

ಮೆಟ್ರೋ ಆವರಣ ಮತ್ತು ರೈಲಿನೊಳಗೆ ತಿನ್ನುವುದು ಮತ್ತು ಕುಡಿಯುವುದನ್ನು ನಿಷೇಧಿಸಲಾಗಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದಂಡ ವಿಧಿಸುತ್ತದೆ.

ಬೆಂಗಳೂರು: ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಹಿಳಾ ಪ್ರಯಾಣಿಕರೊಬ್ಬರಿಗೆ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸೋಮವಾರ ತಿಳಿಸಿದೆ.

ಮೆಟ್ರೋ ಆವರಣ ಮತ್ತು ರೈಲಿನೊಳಗೆ ತಿನ್ನುವುದು ಮತ್ತು ಕುಡಿಯುವುದನ್ನು ನಿಷೇಧಿಸಲಾಗಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದಂಡ ವಿಧಿಸುತ್ತದೆ.

ಈ ಕುರಿತು ಟ್ವೀಟ್ ಮಾಡಿರುವ ನಮ್ಮ ಮೆಟ್ರೋ, ನಮ್ಮ ಮೆಟ್ರೋದಲ್ಲಿ ಮಾದಾವರದಿಂದ ಮಾಗಡಿ ರಸ್ತೆವರೆಗೆ ಪ್ರತಿದಿನ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಬ್ಬರಿಗೆ ಮೆಟ್ರೋ ನಿಯಮಳನ್ನು ಉಲ್ಲಂಘಿಸಿದ್ದಕ್ಕಾಗಿ ಇಂದು 500 ರೂಪಾಯಿ ದಂಡ ವಿಧಿಸಲಾಗಿದೆ. ಶನಿವಾರದಂದು (ಏ.26) ಮೆಟ್ರೋದಲ್ಲಿ ಪ್ರಯಾಣಿಸುವಾಗ ರೈಲಿನೊಳಗೆ ಊಟ ಮಾಡಿದ್ದು, ಇದನ್ನು ಸಹ ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದಿದೆ.

ಇಂದು ಬೆಳಗ್ಗೆ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಮಾದಾವರ ಮೆಟ್ರೋ ನಿಲ್ದಾಣವನ್ನು ಪ್ರವೇಶಿಸಿದಾಗ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿದ್ದಾರೆ. ಬೆಂಗಳೂರು ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಸೇವಿಸುವುದನ್ನು ಮತ್ತು ಪಾನೀಯಗಳನ್ನು ಕುಡಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು ಎಂದು ಮೆಟ್ರೋ ನಿಯಮಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ