ಭಾನುವಾರ ನಡೆದ ಟಿಸಿಎಸ್ 10ಕೆ ಮ್ಯಾರಥಾನ್‌ಗೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು. 
ರಾಜ್ಯ

ನಗರದಲ್ಲಿ ಒಂದೇ ಒಂದು ರಸ್ತೆಯೂ ಗುಂಡಿಮುಕ್ತವಾಗಿಲ್ಲ, ನಮಗಿಂತ ಮುಂಬೈ ರಸ್ತೆಗಳು ಉತ್ತಮವಾಗಿವೆ: ಸರ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಪತ್ರ

ಬೆಂಗಳೂರಿನಲ್ಲಿ ಟಿಸಿಎಸ್ ವರ್ಲ್ಡ್ 10ಕೆ-2025 ಮ್ಯಾರಥಾನ್'ನ್ನು ಭಾನುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಅವರು ಮ್ಯಾರಥಾನ್‌ ವೇಳೆ ಯಾವೆಲ್ಲಾ ಸಮಸ್ಯೆಗಳಾಯಿತು ಎಂಬುದನ್ನು ಪತ್ರದ ಮೂಲಕ ಸರ್ಕಾರಕ್ಕೆ ವಿವರಿಸಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳು ದಯನೀಯ ಸ್ಥಿತಿಯಲ್ಲಿದ್ದು, ಒಂದೇ ಒಂದು ರಸ್ತೆಯೂ ಗುಂಡಿಗಳಿಂದ ಮುಕ್ತವಾಗಿಲ್ಲ. ಅಥ್ಲೀಟ್​ಗಳು ಸುಂದರ ಓಟದ ಬದಲು, ಗುಂಡಿಗಳ ಓಟ, ಧೂಳಿನ ಓಟ, ಅಪಾಯದಿಂದ ಕೂಡಿದ ಓಟ ಎಂಬ ಅನುಭವ ಪಡೆದಿದ್ದು ಬಹಳ ಬೇಸರದ ಸಂಗತಿಯಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಟಿಸಿಎಸ್ ವರ್ಲ್ಡ್ 10ಕೆ-2025 ಮ್ಯಾರಥಾನ್'ನ್ನು ಭಾನುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಅವರು ಮ್ಯಾರಥಾನ್‌ ವೇಳೆ ಯಾವೆಲ್ಲಾ ಸಮಸ್ಯೆಗಳಾಯಿತು ಎಂಬುದನ್ನು ಪತ್ರದ ಮೂಲಕ ಸರ್ಕಾರಕ್ಕೆ ವಿವರಿಸಿದ್ದಾರೆ.

ಈ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿದ್ದು, ಬೇಸರ ವ್ಯಕ್ತಪಡಿಸಲಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹಾಗೂ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಟಿಸಿಎಸ್ ವರ್ಲ್ಡ್ 10ಕೆ ಕಾರ್ಯಕ್ರಮದ ಚಾಲನಾ ಸಮಾರಂಭದಲ್ಲಿ ನೀವಿಬ್ಬರೂ ಭಾಗವಹಿಸಿರುವುದು ನೋಡಿ ಸಂತಸವಾಯಿತು. ಈ ತರಹದ ಕಾರ್ಯಕ್ರಮಗಳು ನಮ್ಮ ಬೆಂಗಳೂರಿನ ಬ್ರ್ಯಾಂಡ್ ಮೌಲ್ಯ ಹೆಚ್ಚಿಸುವುದಕ್ಕೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಉತ್ತೇಜಿಸಲು ತೊಡಗಿಸಿಕೊಂಡಿರುವುದು ಗಮನಾರ್ಹ. ಆದರೆ, ನಾನು ಬೆಂಗಳೂರು ಸಂಸದನಾಗಿ ಮಾತ್ರವಲ್ಲ, ಒಬ್ಬ ಓಟಗಾರನಾಗಿ, ನಾಗರಿಕನಾಗಿ, ಅತ್ಯಂತ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ.

ಇಂದು ನಡೆದ ಓಟದಲ್ಲಿ ಜಗತ್ತಿನ ಶ್ರೇಷ್ಠ ಅಥ್ಲೀಟ್ ಗಳು, ಹಿರಿಯ ನಾಗರಿಕರು, ಸಾಮಾನ್ಯ ನಾಗರಿಕರು ಸೇರಿದಂತೆ ಸುಮಾರು 40 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಆದರೆ, ಅವರೆಲ್ಲರೂ ಸುಂದರ ಓಟದ ಬದಲು, ಗುಂಡಿಗಳ ಓಟ, ಧೂಳಿನ ಓಟ, ಅಪಾಯದಿಂದ ಕೂಡಿದ ಓಟ ಎಂಬ ಅನುಭವ ಪಡೆದದ್ದು ಬಹಳ ಬೇಸರದ ಸಂಗತಿ.

ನಗರದ ಹೃದಯವಾಗಿರುವ ಸಿಬಿಡಿ ರಸ್ತೆಗಳ ಪರಿಸ್ಥಿತಿ ಶೋಚನೀಯವಾಗಿದ್ದು, ಒಂದು ಸಣ್ಣ ಸುಗಮ ರಸ್ತೆ ಕೂಡ ಇಲ್ಲದ್ದು . ಎಲ್ಲೆಲ್ಲೂ ಗುಂಡಿಗಳು. ಓಟಗಾರರು ಮುಗ್ಗರಿಸಿದ್ದು ಗಾಯಗೊಂಡಿದ್ದು, ಹಿರಿಯ ನಾಗರಿಕರು ಹೆಜ್ಜೆ ಹಾಕಲು ಹೆದರುವ ಸ್ಥಿತಿ ಉಂಟಾಗಿದ್ದು ಸಮಂಜಸ ಉಂಟು ಮಾಡಿದ್ದು ಸುಳ್ಳಲ್ಲ. ವೀಲ್‌ಚೇರ್‌ನಲ್ಲಿ ಓಡಿದವರು ಸ್ವಂತ ಶಕ್ತಿಯಿಂದ ಸಾಗಲಾರದೆ, ಅನ್ಯರ ಸಹಾಯ ಪಡೆಯಬೇಕಾದ ಪರಿಸ್ಥಿತಿ ಉಂಟಾಗಿತ್ತು. ಇದರ ಜೊತೆಗೆ ಅನೇಕ ಸ್ಥಳಗಳಲ್ಲಿ ಕಸದ ರಾಶಿಗಳು, ಅನೈರ್ಮೈಲದ ಬದಿಗಳು, ಮುರಿದ ಪಾದಚಾರಿ ಮಾರ್ಗಗಳು ಇವು ಬ್ರ್ಯಾಂಡ್ ಬೆಂಗಳೂರಿನ ಚಿತ್ರಣಗಳಾಗಿದ್ದವು.

ಇದು ವರ್ಲ್ಡ್ ಅಥ್ಲೆಟಿಕ್ಸ್ ಪ್ರಮಾಣಿತ ಗೋಲ್ಡ್ ಲೇಬಲ್ ಈವೆಂಟ್ ಆಗಿದ್ದು. ಜಗತ್ತಿನ ನೂರಾರು ಅತಿಥಿಗಳು ನಮ್ಮತ್ತ ಗಮನಿಸುತ್ತಿದ್ದು, ಈ ಬಗ್ಗೆ ಸೂಕ್ತ ಗಮನ ಹರಿಸಿ ಬ್ರ್ಯಾಂಡ್ ಬೆಂಗಳೂರಿನ ಮೌಲ್ಯವನ್ನು ಹೆಚ್ಚಿಸುವಂತೆ ನಾನು ತಮ್ಮಲ್ಲಿ ವಿನಂತಿಸುತ್ತೇನೆಂದು ಹೇಳಿದ್ದಾರೆ.

ಕೇವಲ 2 ತಿಂಗಳುಗಳ ಹಿಂದೆ ನಾನು ಮುಂಬಯಿಯಲ್ಲಿ ನಡೆದ ಮ್ಯಾರಥಾನ್ ನಲ್ಲಿಯೂ ಭಾಗವಹಿಸಿದ್ದು, ಅಲ್ಲಿನ ಅನುಭವ ಇಷ್ಟೊಂದು ಕಳಪೆ ಆಗಿರಲಿಲ್ಲ ಎಂಬುದು ನನ್ನ ಅಭಿಪ್ರಾಯ. ಕೇವಲ TCS 10ಕೆ ಹಿನ್ನೆಲೆಯಿಂದ ಮಾತ್ರ ನೋಡದೆ, ಬೆಂಗಳೂರು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ತಾವುಗಳು ವಿಶೇಷ ಕಾಳಜಿ ವಹಿಸಿ, ಸಾರ್ವಜನಿಕರ ಅನುಕೂಲಕ್ಕೆ ನಗರದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕೋರುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT