ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ

ಯತ್ನಾಳ್ ಅನೇಕ ಸಂತರು ಮತ್ತು ಆಧ್ಯಾತ್ಮಿಕ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಇದರಲ್ಲಿ ಆಶ್ಚರ್ಯವೇನಿಲ್ಲ.

ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವಕ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಸೋಮವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ.

ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು, ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ಯಶ್ವಂತ್‌ರಾಯಗೌಡ ಪಾಟೀಲ್, ಅಶೋಕ್ ಮನಗೂಳಿ, ವಿಠಲ ಕಟಕದೊಂಡ ಮತ್ತು ಪ್ರಮುಖ ಮುಸ್ಲಿಂ ನಾಯಕರು ಭಾಗವಹಿಸಿದ್ದರು.

ಪ್ರತಿಭಟನೆ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರು ಯತ್ನಾಳ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಯತ್ನಾಳ್ ಅವರ ಹೇಳಿಗೆ ಅಸಂಬದ್ಧ, ಕೋಮು ಸೌಹಾರ್ದತೆಯನ್ನು ನಾಶಪಡಿಸರುವ ಮತ್ತು ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಸಚಿವ ಶಿವಾನಂದ ಪಾಟೀಲ್ ಅವರು ಮಾತನಾಡಿ, ಯತ್ನಾಳ್ ಅನೇಕ ಸಂತರು ಮತ್ತು ಆಧ್ಯಾತ್ಮಿಕ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಇದರಲ್ಲಿ ಆಶ್ಚರ್ಯವೇನಿಲ್ಲ. ಇದೀಗ ಮಹಮ್ಮದ ಪೈಗಂಬರ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಈ ಹಿಂದೆ 12 ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರ ವಿರುದ್ಧವೂ ಇದೇ ರೀತಿಯ ಭಾಷೆ ಬಳಕೆ ಮಾಡಿದ್ದರು. ಯತ್ನಾಳ್ ಪ್ರಜ್ಞೆ ಕಳೆದುಕೊಂಡಿದ್ದಾರೆ, ಹೀಗಾಗಿಯೇ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಮುಸ್ಲಿಂ ವಿರೋಧಿ ಅಥವಾ ಇಸ್ಲಾಮಿಕ್ ವಿರೋಧಿ ಹೇಳಿಕೆಗಳನ್ನು ನೀಡಿದರೆ ಹಿಂದೂ ಬೆಂಬಲ ಸಿಗುತ್ತದೆ ಎಂದು ಯತ್ನಾಳ್ ತಿಳಿಸಿದ್ದಾರೆ. ಆದರೆ, ವಾಸ್ತವದಲ್ಲಿ, ಹಿಂದೂಗಳು ಕೂಡ ಯತ್ನಾಳ್ ಅವರ ಕೋಮುವಾದಿ ಹೇಳಿಕೆಗಳಿಗಾಗಿ ಅಸಮಾಧಾನಗೊಂಡಿದ್ದಾರೆ ಮತ್ತು ಅಸಂತೋಷಗೊಂಡಿದ್ದಾರೆಂದು ತಿಳಿಸಿದರು. ಶಾಸಕ ಯಶವಂತ ರಾಯಗೌಡ ಪಾಟೀಲ್ ಅವರು ಮಾತನಾಡಿ, ಯತ್ನಾಳ್ ಅವರ ಹೇಳಿಕೆಯನ್ನು ಖಂಡಿಸಿದರು.

ಯತ್ನಾಳ ಆಡುತ್ತಿರುವ ಮಾತುಗಳಿಂದ ಆತನ ವ್ಯಕ್ತಿತ್ವಕ್ಕೆ ಮಾತ್ರವಲ್ಲ, ಸರ್ವರನ್ನು ಸಮಾನವಾಗಿ ಕಂಡ ಇಡೀ ಬಸವ ನಾಡಿಗೆ ಅವಮಾನವಾಗಿದೆ. ಸಮಾಜದ ಶಾಂತಿಗೆ ಭಂಗ ತರುತ್ತಿರುವ ಯತ್ನಾಳ ವಿರುದ್ಧ ಮುಖ್ಯಮಂತ್ರಿ, ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT