ಡೋನಟ್ 
ರಾಜ್ಯ

ಮಕ್ಕಳ ಫೇವರೆಟ್ 'Doughnut'ಗಳಲ್ಲಿ ಅತಿಯಾದ ಕೃತಕ ಬಣ್ಣಗಳ ಬಳಕೆ: ಸೇವನೆಗೆ ಅಸುರಕ್ಷಿತ ಎಂದ FDA

ಡೋನಟ್ ಗಳಲ್ಲಿ ಅತಿಯಾದ ಕೃತಕ ಬಣ್ಣಗಳನ್ನು ಬಳಕೆ ಮಾಡಲಾಗುತ್ತಿದ್ದು, ಇದು ಅನುಮೋದಿತ ಸುರಕ್ಷತಾ ಮಿತಿಗಳನ್ನು ಮೀರಿದೆ.

ಬೆಂಗಳೂರು: ಮಕ್ಕಳು ಹೆಚ್ಚಾಗಿ ಇಷ್ಟಪಡುವ ಜನಪ್ರಿಯ ತಿಂಡಿ ಡೋನಟ್‌ಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) "ಸೇವನೆಗೆ ಅಸುರಕ್ಷಿತ" ಎಂದು ಘೋಷಿಸಿದೆ.

ಡೋನಟ್ ಗಳಲ್ಲಿ ಅತಿಯಾದ ಕೃತಕ ಬಣ್ಣಗಳನ್ನು ಬಳಕೆ ಮಾಡಲಾಗುತ್ತಿದ್ದು, ಇದು ಅನುಮೋದಿತ ಸುರಕ್ಷತಾ ಮಿತಿಗಳನ್ನು ಮೀರಿದೆ. ಇದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಿಳಿಸಲಾಗಿದೆ.

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ವೇಳೆ ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಪರಿಶೀಲನೆ ವೇಳೆ ಡೋನಟ್ ಗಳಲ್ಲಿ ಅತಿಯಾದ ಕೃತಕ ಬಣ್ಣ ಬಳಕೆ ಮಾಡಿರುವುದು ಪತ್ತೆಯಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದೊಳಗೆ ಕಾರ್ಯನಿರ್ವಹಿಸುತ್ತಿರುವ ಒಟ್ಟು 12 ಆಹಾರ ಮಳಿಗೆಗಳ ಆಹಾರ ಮಾದರಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ, ತಪಾಸಣೆಯ ವೇಳೆ ಎರಡು ಪ್ರಮುಖ ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ.

ಪ್ಯಾಕೇಜ್ಡ್ ಕುಡಿಯುವ ನೀರಿನ ಕಂಪನಿ ಮತ್ತು ತುಪ್ಪ, ಸಿಹಿತಿಂಡಿಗಳು, ಫಾಸ್ಟ್ ಫುಡ್ ಮತ್ತು ಮಸಾಲೆ ಪುಡಿಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಆಹಾರ ಬ್ರ್ಯಾಂಡ್ ಕಂಪನಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇತರ ಕೆಲವು ಆಹಾರ ಮಾದರಿಗಳ ಫಲಿತಾಂಶಗಳು ಇನ್ನೂ ಬಾಕಿಯಿದ್ದು, ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೋನಟ್ ಗಳು ಆಕರ್ಷಕವಾಗಿ ಕಾಣುವಂತೆ ಮಾಡಲು ರೆಡ್ 40 ಅಥವಾ ಅಲ್ಲುರಾ ರೆಡ್, ಎಲ್ಲೋ 5 ಅಥವಾ ಟಾರ್ಟ್ರಾಜಿನ್‌ನಂತಹ ಬಣ್ಣಗಳನ್ನು ಬಳಕೆ ಮಾಡಲಾಗುತ್ತಿದೆ. ಇವು ಆರೋಗ್ಯಕ್ಕೆ ಹಾನಿಕಾರ ಎಂದು ಎಫ್'ಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಬಣ್ಣಗಳನ್ನು ಸಾಮಾನ್ಯವಾಗಿ ನಿಯಂತ್ರಿತ ಪ್ರಮಾಣದಲ್ಲಿ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ, ಆದರೆ ಅವುಗಳನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯದ ಅಪಾಯಗಳನ್ನು ಉಂಟುಮಾಡಬಹುದು, ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ಸೇವಿಸಿದಾಗ ಚರ್ಮದ ದದ್ದುಗಳು ಮತ್ತು ಊತ ಸೇರಿದಂತೆ ಅಲರ್ಜಿಗಳು ಎದುರಾಗುತ್ತವೆ.

ಮಕ್ಕಳಲ್ಲಿ ಹೈಪರ್ಆಕ್ಟಿವಿಟಿ ಅಥವಾ ನಡವಳಿಕೆಯ ಸಮಸ್ಯೆಗಳನ್ನು ಉಂಟುಮಾಡುತ್ತವೆ. ದೀರ್ಘಾವಧಿಯಲ್ಲಿ, ಕೆಲವು ಕೃತಕ ಬಣ್ಣಗಳಿಗೆ ಅತಿಯಾಗಿ ಒಡ್ಡಿಕೊಳ್ಳುವುದರಿಂದ ಕ್ಯಾನ್ಸರ್ ಮತ್ತು ಇತರೆ ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಹೆಚ್ಚಿನ ಸಕ್ಕರೆ ಹೊಂದಿರುವ ಆಹಾರಗಳು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಹೆಚ್ಚಿನ ಸಕ್ಕರೆ ಅಂಶ ಮತ್ತು ಆಹಾರ ಬಣ್ಣಗಳ ಸಂಯೋಜನೆಯು ಪರಿಣಾಮಗಳನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT