ಅನುಪಮ್ ಅಗರ್ವಾಲ್(ಸಂಗ್ರಹ ಚಿತ್ರ) 
ರಾಜ್ಯ

ಮಂಗಳೂರು: ಕ್ರಿಕೆಟ್ ಪಂದ್ಯದ ವೇಳೆ ಜಗಳ; ಗುಂಪು ಹಲ್ಲೆಗೆ ಯುವಕ ಬಲಿ, 15 ಜನರ ಬಂಧನ

ಪ್ರಕರಣ ಸಂಬಂಧ ಇಲ್ಲಿಯವರೆಗೆ, 15 ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಕನಿಷ್ಠ ಇನ್ನೂ 10 ಜನರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಕುಡುಪು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ನಡೆದಿದ್ದು, 25ಕ್ಕೂ ಹೆಚ್ಚು ಜನರ ಗುಂಪೊಂದು ಯುವಕನನ್ನು ಥಳಿಸಿ ಕೊಲೆ ಮಾಡಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 27 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಟ್ರ ಕಲ್ಲುರ್ಟಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಹತ್ಯೆಯಾದ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ, ಆತನ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದರು.

"ದೇವಾಲಯದ ಮೈದಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಆರಂಭದಲ್ಲಿ, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು. ಏಪ್ರಿಲ್ 28 ರಂದು ನಡೆದ ಮರಣೋತ್ತರ ಪರೀಕ್ಷೆಯಲ್ಲಿ ಯುವಕನ ಬೆನ್ನಿನ ಮೇಲೆ ಬಲವಾದ ಹೊಡೆತದ ಗಾಯಗಳಾಗಿದ್ದು, ರಕ್ತಸ್ರಾವ, ಆಘಾತ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಯುವಕ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದೆ" ಎಂದರು.

ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪಿನಿಂದ ನಡೆದ ಕೊಲೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ, 2023ರ ಸೆಕ್ಷನ್ 103(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣ ಸಂಬಂಧ ಇಲ್ಲಿಯವರೆಗೆ, 15 ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಪೊಲೀಸರು ಕನಿಷ್ಠ ಇನ್ನೂ 10 ಜನರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

"ಕುಡುಪು ನಿವಾಸಿ ಸಚಿನ್ ಎಂದು ಗುರುತಿಸಲಾದ ಪ್ರಮುಖ ಆರೋಪಿ ಈಗಾಗಲೇ ನಮ್ಮ ವಶದಲ್ಲಿದ್ದಾನೆ. ಈ ಪ್ರಕರಣದಲ್ಲಿ ಅನ್ವಯಿಸಲಾದ ಸೆಕ್ಷನ್ ತುಂಬಾ ಕಠಿಣವಾಗಿದೆ - ಸಾಬೀತಾದರೆ, ಆರೋಪಿಗಳು ವೈಯಕ್ತಿಕವಾಗಿ ಅಥವಾ ಗುಂಪಾಗಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಯನ್ನು ಎದುರಿಸಬಹುದು. ಅಪರಾಧದಲ್ಲಿ ಐದಕ್ಕೂ ಹೆಚ್ಚು ಜನರು ಭಾಗಿಯಾಗಿರುವುದರಿಂದ ನಾವು ಬಿಎನ್‌ಎಸ್ ಅಡಿಯಲ್ಲಿ ಈ ಸೆಕ್ಷನ್ ಅನ್ನು ಅನ್ವಯಿಸಿದ್ದೇವೆ" ಎಂದು ಅಗರ್‌ವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ