ಬಸವರಾಜ ರಾಯರೆಡ್ಡಿ  online desk
ರಾಜ್ಯ

ರಕ್ಷಣಾ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಆರ್ಥಿಕ ಸಲಹೆಗಾರ ಆಗ್ರಹ

ರಕ್ಷಣಾ ವಲಯದ ಬಜೆಟ್ ಗಾತ್ರವನ್ನು 6.81 ಲಕ್ಷ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಪ್ರಧಾನಿ ಮೋದಿಯವರು ಸಂಸತ್ ವಿಶೇಷ ಅಧಿವೇಶನವನ್ನು ಕರೆಯಬೇಕು.

ಬೆಂಗಳೂರು: ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಯುದ್ಧ ಬೇಡ ಎಂದು ಹೇಳಿಲ್ಲ. ಅವರ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಇದರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಅಶೋಕ್, ವಿಜಯೇಂದ್ರ ಅವರು ಸಿಎಂ ವಿರುದ್ಧ ಮಾತನಾಡುವುದು ಸರಿಯಲ್ಲ. ಕೂಡಲೇ ಇಬ್ಬರು ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಿಎಂ ಅವರ ಹೇಳಿಕೆ ಪಾಕಿಸ್ತಾನದಲ್ಲಿ ಬಂದರೆ ಅದಕ್ಕೂ ನಮಗೂ ಸಂಬAಧವಿಲ್ಲ. ಸಿದ್ದರಾಮಯ್ಯ ಯಾವತ್ತೂ ದೇಶದ ವಿರುದ್ಧ ಮಾತಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಇದೇ ವೇಳೆ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸುವಂತೆ ಆಗ್ರಹಿಸಿದ ಅವರು, ರಕ್ಷಣಾ ವಲಯದ ಬಜೆಟ್ ಗಾತ್ರವನ್ನು 6.81 ಲಕ್ಷ ಕೋಟಿ ರೂ.ಗಳಿಂದ 12 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಲು ಪ್ರಧಾನಿ ಮೋದಿಯವರು ಸಂಸತ್ ವಿಶೇಷ ಅಧಿವೇಶನವನ್ನು ಕರೆಯಬೇಕೆಂದು ಸಲಹೆ ನೀಡಿದರು.

ಪರಿಸ್ಥಿತಿಯನ್ನು ನಿರ್ಣಯಿಸಲು ಪ್ರಧಾನಮಂತ್ರಿಗಳು ವಿರೋಧ ಪಕ್ಷದ ನಿಯೋಗವನ್ನು ಕಾಶ್ಮೀರಕ್ಕೆ ಕರೆದೊಯ್ಯಬೇಕು. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಯೋತ್ಪಾದಕರ ಅಡಗುತಾಣಗಳ ಮೇಲೆ ಬಾಂಬ್ ದಾಳಿ ಮಾಡಬೇಕು. ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ನ್ಯಾಯಾಲಯಕ್ಕೂ ಎಳೆದೊಯ್ಯಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ