ಗೃಹ ಸಚಿವ ಡಾ.ಜಿ.ಪರಮೇಶ್ವರ್ 
ರಾಜ್ಯ

ದೇಶಕ್ಕಾಗಿ ಕಾಂಗ್ರೆಸ್ ಮಾಡಿದಷ್ಟು ತ್ಯಾಗ ಬೇರೆ ಯಾರೂ ಮಾಡಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್

ದೇಶ ಭದ್ರತೆಗಾಗಿ ಕಾಂಗ್ರೆಸ್ ಮಾಡಿದ ತ್ಯಾಗ ಅಪಾರ. ರಾಷ್ಟ್ರೀಯ ಭದ್ರತೆಗಾಗಿ ಕಾಂಗ್ರೆಸ್ ಮಾಡಿರುವಷ್ಟು ತ್ಯಾಗವನ್ನು ಬೇರೆ ಯಾರೂ ಮಾಡಿಲ್ಲ. ತ್ಯಾಗದ ಬಗ್ಗೆ ಇತರರು ನಮಗೆ ಪಾಠ ಕಲಿಸುವ ಅಗತ್ಯವಿಲ್ಲ.

ಬೆಂಗಳೂರು: ದೇಶದ ವಿಚಾರದಲ್ಲಿ ಕಾಂಗ್ರೆಸ್ ಮಾಡಿದಷ್ಟು ತ್ಯಾಗ ಬೇರೆ ಯಾರೂ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶ ಭದ್ರತೆಗಾಗಿ ಕಾಂಗ್ರೆಸ್ ಮಾಡಿದ ತ್ಯಾಗ ಅಪಾರ. ರಾಷ್ಟ್ರೀಯ ಭದ್ರತೆಗಾಗಿ ಕಾಂಗ್ರೆಸ್ ಮಾಡಿರುವಷ್ಟು ತ್ಯಾಗವನ್ನು ಬೇರೆ ಯಾರೂ ಮಾಡಿಲ್ಲ. ತ್ಯಾಗದ ಬಗ್ಗೆ ಇತರರು ನಮಗೆ ಪಾಠ ಕಲಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ನಾವು ಮೃದು ನಿಲುವು ತೆಗೆದುಕೊಂಡಿಲ್ಲ. ನಮ್ಮ ನಾಯಕರು ಈಗಾಗಲೇ ಸರ್ವಪಕ್ಷ ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ನಾವೆಲ್ಲರೂ ಎಚ್ಚರಿಕೆಯಿಂದ ಮಾತನಾಡಬೇಕು. ಇದನ್ನು ಪಕ್ಷಾತೀತವಾಗಿ ನೋಡಬೇಕು ಮತ್ತು ಪಕ್ಷಾತೀತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ರಾಷ್ಟ್ರೀಯ ಭದ್ರತೆಯ ವಿಷಯಗಳಲ್ಲಿ, ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ಒಬ್ಬ ವ್ಯಕ್ತಿ ಒಂದು ಮಾತು ಹೇಳುವುದು ಮತ್ತು ಇನ್ನೊಬ್ಬರು ಬೇರೊಂದು ಮಾತು ಹೇಳುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದರು.

ಯುದ್ಧ ಬೇಡ ಹೇಳಿಕೆಗೆ ಸಿಎಂ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿ, ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿದ್ದೇನೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. ಅಗತ್ಯ ಬಿದ್ದಾಗ ಯುದ್ಧ ಮಾಡಲು ಹಿಂದೆ ನೋಡಬಾರದು ಎಂಬುದನ್ನು ಹೇಳಿದ್ದಾರೆ ಎಂದರು.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ಶಾಲನ್ನು ಧರಿಸಿ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು ಎಂದು ಇದೇ ವೇಳೆ ಪರಮೇಶ್ವರ್ ಅವರು ಆರೋಪಿಸಿದರು.

ಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಯಾಕೆ ಸಿಎಂ ಸಿದ್ದರಾಮಯ್ಯ ಅಷ್ಟೊಂದು ಅಪ್ಸೆಟ್ ಆದರು ಎಂದು ಗೊತ್ತಿಲ್ಲ. ಆದರೆ ಐದಾದು ಜನ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಕಾಂಗ್ರೆಸ್ ಪಕ್ಷದ ಶಾಲು ಹಾಕೊಂದು ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದರು. ಸಿಎಂ ಸಿದ್ದರಾಮಯ್ಯ ಅವರು ಮಾತನಾಡುವ ಸಂದರ್ಭದಲ್ಲಿ ಅವರು ಗದ್ದಲ ಉಂಟು ಮಾಡಿದ್ದರು.

ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

UAE ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಕುರಿತು ಚರ್ಚೆ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ, ಉತ್ತರಿಸುವಂತೆ ಖಡಕ್ ಸೂಚನೆ

ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 'ಇತಿಹಾಸ ಪುನರಾವರ್ತನೆಯಾದರೆ, ಪಾಕ್‌ಗೆ ತುಂಬಾ ಕೆಟ್ಟದ್ದು' ಎಂದ ಮುಂಬೈ ಇಂಡಿಯನ್ಸ್ ಸ್ಪಿನ್ನರ್!

SCROLL FOR NEXT