ನೇಮಕಾತಿ ಆದೇಶ ಪತ್ರ ನೀಡಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಗ್ರಾಮ ಆಡಳಿತಾಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆ ಆಲಿಸಬೇಕು: ಸಿಎಂ ಸಿದ್ದರಾಮಯ್ಯ

ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ.

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ನೂತನವಾಗಿ ಆಯ್ಕೆಯಾಗಿರುವ 1,000 ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದ ಮುಖ್ಯಮಂತ್ರಿ, ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದರು.

ಕೃಷಿ ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರು ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವವರು ಎಂಬ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ. ಸದಾ ಇಷ್ಟೇ ಪಾರದರ್ಶಕ ನೇಮಕಾತಿ ನಡೆದರೆ ಅರ್ಹರಿಗೆ ಉದ್ಯೋಗ ದೊರೆಯುತ್ತದೆ, ಯೋಗ್ಯರು ಸರ್ಕಾರಿ ಸೇವೆಗೆ ದೊರೆತು ಸಮಾಜದ ಏಳಿಗೆ ಸಾಧ್ಯವಾಗುತ್ತದೆ. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9,834 ಒಟ್ಟು ಗ್ರಾಮ ಆಡಳಿತಾಧಿಕಾರಿಗಳಿದ್ದು, ಅದರಲ್ಲಿ 8,003 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ 1,000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಇಂದು ಆಯ್ಕೆಯಾದವರು ಸಾಧ್ಯವಾದಷ್ಟು ಮಟ್ಟಿಗೆ ಕೆಲಸ ಮಾಡುವ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದು ತಿಳಿಸಿದರು.

ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ಕರೆ ನೀಡಿದರು.

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ನೋಡಿಕೊಳ್ಳುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ ನನ್ನ ತಂದೆ ಶಾನುಬೋಗರ ಬಳಿ ನನ್ನನ್ನು ಚುನಾವಣೆಗೆ ನಿಲ್ಲಿಸಬೇಕೋ ಬೇಡವೋ ಎಂದು ಕೇಳಿ ನಿಲ್ಲಬಾರದು ಎಂದು ಹಠ ಮಾಡಿದ್ದರು, ನಂತರ ನಾನು ಅವರ ಮಾತು ಕೇಳದೆ ಸ್ಪರ್ಧಿಸಿ ಗೆದ್ದಿದ್ದೆ. ಚುನಾವಣೆಗೆ ಆಗ ರೂ. 3,500 ಮಾತ್ರ ವೆಚ್ಚವಾಗಿತ್ತು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT