ಸಿದ್ದರಾಮಯ್ಯ 
ರಾಜ್ಯ

ಕೇರಳದ ಮೊಹಮ್ಮದ್ ಅಶ್ರಫ್ ಹತ್ಯೆ ಪ್ರಕರಣ: ಪಾಕ್ ಬೆಂಬಲಿಸುವುದು ದೇಶದ್ರೋಹ; ಹತ್ಯೆಕೋರರಿಗೆ ಶಿಕ್ಷೆಯಾಗಲಿದೆ- ಸಿಎಂ ಸಿದ್ದರಾಮಯ್ಯ

ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು.

ಬೆಂಗಳೂರು: ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮಂಗಳೂರು ನಗರದಲ್ಲಿ ನಡೆದ ಗುಂಪು ಹತ್ಯೆ ಘಟನೆಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಂಪು ಹತ್ಯೆ ಮಾಡಿದವರನ್ನು ಬಿಡುವುದಿಲ್ಲ. ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ 15 ಜನರನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಂಡು ವರದಿ ಬಂದ ನಂತರ ಅದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಾಕಿಸ್ತಾನವನ್ನು ಬೆಂಬಲಿಸಿ ಮಾತನಾಡುವುದು ಸಂಪೂರ್ಣವಾಗಿ ತಪ್ಪು. ಅದು ದೇಶದ್ರೋಹ. ನಿಮಗೆ ಅರ್ಥವಾಗಿದೆಯೇ?" ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು. ಇನ್ನು ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ 20 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ದೃಢಪಡಿಸಿದ್ದಾರೆ.

ಮಂಗಳೂರು ಕೋಮು ಸೂಕ್ಷ್ಮ ನಗರವಾಗಿರುವುದರಿಂದ ರಾಜ್ಯ ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮುಸ್ಲಿಂ ಸಂಘಟನೆಗಳು ಈಗಾಗಲೇ ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ಗುಂಪು ಹತ್ಯೆಗೆ ಕಾರಣವಾದ ಪ್ರಚೋದನಕಾರಿ ಭಾಷಣಗಳನ್ನು ನೀಡಿದವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕೆಂದು ಒತ್ತಾಯಿಸಿವೆ. ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಘಟನೆಗಳು ಹೆಚ್ಚುತ್ತಿರುವ ಬಗ್ಗೆಯೂ ಮುಸ್ಲಿಂ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಹಿಂದೂ ಕಾರ್ಯಕರ್ತರು ಮಾಡಿದ ಪ್ರಚೋದನಕಾರಿ ಭಾಷಣಗಳು ಗುಂಪು ಹತ್ಯೆ ಘಟನೆಗೆ ಕಾರಣವಾಗಿವೆ ಎಂದು ಮುಸ್ಲಿಂ ನಾಯಕರು ಆರೋಪಿಸಿದ್ದಾರೆ. ಇನ್ನು ತನಿಖೆ ವಿಳಂಬಕ್ಕಾಗಿ ಪೊಲೀಸ್ ಇಲಾಖೆಯನ್ನು ಟೀಕಿಸಿದ ಅವರು, ಭಾನುವಾರ ವ್ಯಕ್ತಿಯ ಹತ್ಯೆ ಬೆಳಕಿಗೆ ಬಂದ ನಂತರ ಈ ಘಟನೆ ಕ್ಷುಲ್ಲಕ ವಿಷಯಕ್ಕೆ ನಡೆದಿದೆ ಎಂದು ಹೇಳಿದ್ದ ಪೊಲೀಸರ ಹೇಳಿಕೆಯನ್ನು ಸಂಘಟನೆ ಖಂಡಿಸಿದೆ.

'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ಆರೋಪದ ಮೇಲೆ 30ಕ್ಕೂ ಹೆಚ್ಚು ಜನರ ಗುಂಪೊಂದು 40 ವರ್ಷದ ಮೊಹಮ್ಮದ್ ಅಶ್ರಫ್ ಎಂಬಾತನನ್ನು ತೀವ್ರವಾಗಿ ಥಳಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಅಶ್ರಫ್ ನಂತರ ಮೃತಪಟ್ಟಿದ್ದನು. ಅಶ್ರಫ್ ನೆರೆಯ ರಾಜ್ಯವಾದ ಕೇರಳದ ಮಾನಂದವಾಡಿ ಬಳಿಯ ಉಲ್ಲಪಲ್ಲಿ ಗ್ರಾಮದವನು.

ಭಾನುವಾರ ಮಧ್ಯಾಹ್ನ ಕ್ರಿಕೆಟ್ ಮೈದಾನದಲ್ಲಿ ಮೊಹಮ್ಮದ್ ಅಶ್ರಫ್ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದರಿಂದ ಅಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಡುತ್ತಿದ್ದ ಜನರು ಆತನ ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತಾ (BNS) ಕಾಯ್ದೆಯ ಸೆಕ್ಷನ್ 103(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಸೆಕ್ಷನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ಸೂಚಿಸುತ್ತದೆ. ಪ್ರಮುಖ ಆರೋಪಿಯನ್ನು ಆಟೋ ಚಾಲಕ ಸಚಿನ್ ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ದೇವದಾಸ್, ಸಾಯಿದೀಪ್, ಮಂಜುನಾಥ್ ಸೇರಿದಂತೆ ಇತರರು ಸೇರಿದ್ದಾರೆ. ಮಾಜಿ ಕಾರ್ಪೊರೇಟರ್ ಒಬ್ಬರ ಪತಿಯನ್ನು ಸಹ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT