ಲಾಯರ್ ಜಗದೀಶ್ 
ರಾಜ್ಯ

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಈ ಬಗ್ಗೆ ಲಾಯರ್‌ ಜಗದೀಶ್‌ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, ತಮಗೆ ಜಾಮೀನು ಸಿಕ್ಕಿರುವುದಾಗಿ ಹೇಳಿದ್ದಾರೆ. ನಾನು ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದಿರುವ ಜಗದೀಶ್‌, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡಲ್‌ನ್ನು ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೆಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು ... ಇವೆಲ್ಲವೂ ನನ್ನ ಹೋರಾಟದ ಭಾಗ.

ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳೀಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT