ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ 
ರಾಜ್ಯ

ಕಾಂಗ್ರೆಸ್ ರ‍್ಯಾಲಿ ವೇಳೆ ಭದ್ರತಾ ವೈಫಲ್ಯ: ವರದಿ ಕೋರಿದ ಸಚಿವ ಪರಮೇಶ್ವರ್

ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಭದ್ರತಾ ಲೋಪವಾಗಿದೆಯೇ ಎಂದು ಪರಿಶೀಲಿಸಿ ವರದಿ ಸಲ್ಲಿಸುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ (ಕಾನೂನು ಮತ್ತು ಸುವ್ಯವಸ್ಥೆ) ಸೂಚನೆ ನೀಡಲಾಗಿದೆ ಎಂದು ಸಚಿವ ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಬಿಜೆಪಿ ಮಹಿಳಾ ಸದಸ್ಯರು ಕಾಂಗ್ರೆಸ್ ಶಾಲು ಧರಿಸಿ ಸ್ಥಳಕ್ಕೆ ಬಂದಿದ್ದು, ಸಿಎಂ ಮಾತನಾಡುವಾಗ ಅವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ. ಹೀಗಾಗಿ ಇಲಾಖೆಯಿಂದ ಯಾವುದೇ ಲೋಪವಾಗಿದೆಯೇ ಎಂದು ಪರಿಶೀಲಿಸಿ ವರದಿ ನೀಡುವಂತೆ ಎಡಿಜಿಪಿ (ಎಲ್ & ಒ) ಅವರಿಗೆ ನಿರ್ದೇಶನ ನೀಡಿದ್ದೇನೆಂದು ಹೇಳಿದರು.

ಪಾಕಿಸ್ತಾನದೊಂದಿಗೆ ಯುದ್ಧದ ಅಗತ್ಯವಿಲ್ಲ ಎಂಬ ಸಿಎಂ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ವಿರೋಧ ಪಕ್ಷದ ಬಿಜೆಪಿ ಆಗ್ರಹ ಕುರಿತು ಮಾತನಾಡಿ, ಯುದ್ಧಕ್ಕೆ ಹಿಂಜರಿಯಬಾರದು ಎಂದು ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ, ಹಿರಿಯ ಕಾಂಗ್ರೆಸ್ ನಾಯಕರು ಈಗಾಗಲೇ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ನಾಯಕರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡುವುದು ಸರಿಯಲ್ಲ. ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿದ್ದು, ಅವರು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT