ಸಾಂದರ್ಭಿಕ ಚಿತ್ರ 
ರಾಜ್ಯ

ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ: ನಿಟ್ಟುಸಿರು ಬಿಟ್ಟ ಸವಾರರು..!

ಏಪ್ರಿಲ್ 2 ರಂದು, ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ಆರು ವಾರಗಳ ಕಾಲಾವಕಾಶ ನೀಡಿತ್ತು.

ಬೆಂಗಳೂರು: ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಟ್ಯಾಕ್ಸಿ ಸಂಸ್ಥೆಗಳಿಗೆ ನೀಡಿದ್ದ ಗಡುವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಮತ್ತೆ ಆರು ವಾರಗಳವರೆಗೆ ವಿಸ್ತರಿಸಿದೆ.

ಸಮಯ ವಿಸ್ತರಣೆ ಕೋರಿ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ಜ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಏಪ್ರಿಲ್ 2 ರಂದು, ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ಆರು ವಾರಗಳ ಕಾಲಾವಕಾಶ ನೀಡಿತ್ತು.

ಆರು ವಾರಗಳ ನಂತರ, ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಎಂದು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೂ ಸೂಚನೆ ನೀಡಿತ್ತು.

ವಾದ -ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ‘ರಾಜ್ಯ ಸರಕಾರ ಬೈಕ್‌ ಟ್ಯಾಕ್ಸಿಗಳಿಗೆ ಯಾವುದೇ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. 1988ರ ಮೋಟಾರು ವಾಹನ ಕಾಯಿದೆಯ ಸೆಕ್ಷನ್‌ 3ರಡಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹೀಗಾಗಿ, ಆರು ವಾರಗಳ ಒಳಗೆ ಎಲ್ಲಾ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ನೀಡಲಾದ ಸಮಯವನ್ನು ವಿಸ್ತರಿಸುವಂತೆ ಕೋರಿ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕರ್ನಾಟಕ ರಾಜ್ಯದಲ್ಲಿ ಸುಮಾರು ಆರು ಲಕ್ಷಕ್ಕೂ ಹೆಚ್ಚು ಮಂದಿ ಬೈಕ್ ಟ್ಯಾಕ್ಸಿಗಳ ಮೂಲಕ ಜೀವನ ರೂಪಿಸಿಕೊಂಡಿದ್ದಾರೆ. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರಿಂದ ಅವರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೆ, ದೇಶದ ಹಲವು ರಾಜ್ಯ ಸರ್ಕಾರಗಳು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ನಿಯಮಗಳನ್ನು ರೂಪಿಸಿವೆ. ಆದರೆ, ರಾಜ್ಯದಲ್ಲಿ ಈವರೆಗೆ ಯಾವುದೇ ನಿಯಮಗಳನ್ನು ರೂಪಿಸಿಲ್ಲ. ಹೀಗಾಗಿ ಹೈಕೋರ್ಟ್ ಈ ಹಿಂದೆ ನೀಡಿದ್ದ ಕಾಲಾವಕಾಶ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಬೈಕ್ ಟ್ಯಾಕ್ಸಿಗಳನ್ನು ಸೇವೆಯನ್ನು ಜೂನ್ 15ರ ವರೆಗೂ ನಡೆಸಲು ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT