ಸಾಂದರ್ಭಿಕ ಚಿತ್ರ  
ರಾಜ್ಯ

ಬೇಸಿಗೆ ರಜೆ: ಬೆಂಗಳೂರಿನಿಂದ ಮಧುರೈ, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಸೇವೆ

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್ ಮತ್ತು ಕೊಡೈಕೆನಾಲ್ ರಸ್ತೆ ನಿಲುಗಡೆ ಹೊಂದಿವೆ.

ಬೆಂಗಳೂರು: ಈಗ ಬೇಸಿಗೆ ರಜೆ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹಲವು ವಿಶೇಷ ರೈಲುಗಳ ಸಂಚಾರಕ್ಕೆ ಮುಂದಾಗಿದೆ. ಬೆಂಗಳೂರು ಟು ಮಧುರೈ, ಯಶವಂತಪುರ ಟು ವಿಜಯಪುರ ಮತ್ತು ಬೆಂಗಳೂರು ಟು ಬೆಳಗಾವಿ ಮಧ್ಯೆ ಈ ವಿಶೇಷ ರೈಲುಗಳು ಸಂಚರಿಸಲಿವೆ.

ಬೆಂಗಳೂರು ಟು ಮಧುರೈ

ರೈಲು ಸಂಖ್ಯೆ 06521: ಎಸ್​ಎಂವಿಟಿ ಬೆಂಗಳೂರು ಟು ಮಧುರೈ ವಿಶೇಷ ಎಕ್ಸ್‌ಪ್ರೆಸ್ ರೈಲು​ ಏಪ್ರಿಲ್ 30 ​ ರಂದು SMVT ಬೆಂಗಳೂರಿನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 06:15 ಗಂಟೆಗೆ ಮಧುರೈ ತಲುಪಲಿದೆ.

ರೈಲು ಸಂಖ್ಯೆ 06522: ಮಧುರೈ ಟು ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮೇ 1 ರಂದು ಮಧುರೈನಿಂದ ಬೆಳಿಗ್ಗೆ 09:10 ಗಂಟೆಗೆ ಹೊರಟು ಅದೇ ದಿನ ಸಂಜೆ 7:50 ಗಂಟೆಗೆ ಬೆಂಗಳೂರು ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್ ಮತ್ತು ಕೊಡೈಕೆನಾಲ್ ರಸ್ತೆ ನಿಲುಗಡೆ ಹೊಂದಿವೆ.

ಯಶವಂತಪುರ ಟು ವಿಜಯಪುರ

ರೈಲು ಸಂಖ್ಯೆ 06561: ಯಶವಂತಪುರ-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 30 ರಂದು ಯಶವಂತಪುರದಿಂದ ರಾತ್ರಿ 10 ಗಂಟೆಗೆ ಹೊರಟು, ಮರುದಿನ ಮಧ್ಯ 02:05 ಗಂಟೆಗೆ ವಿಜಯಪುರ ತಲುಪುತ್ತದೆ.

ರೈಲು ಸಂಖ್ಯೆ 06562: ವಿಜಯಪುರ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್​ ರೈಲು ವಿಜಯಪುರದಿಂದ ಮೇ 1ರಂದು ಸಂಜೆ 07 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 11:15 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿವೆ.

ಬೆಂಗಳೂರು ಟು ಬೆಳಗಾವಿ

ರೈಲು ಸಂಖ್ಯೆ 06551: SMVT ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 30 ಮತ್ತು ಮೇ 2ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 07:30 ಗಂಟೆಗೆ ಬೆಳಗಾವಿಗೆ ತಲುಪಲಿದೆ.

ರೈಲು ಸಂಖ್ಯೆ 06552: ಬೆಳಗಾವಿ-SMVT ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಬೆಳಗಾವಿಯಿಂದ ಮೇ 1ರಂದು ಮತ್ತು ಮೇ 3ರಂದು ಸಂಜೆ 05:30 ಗಂಟೆಗೆ ಹೊರಟು ಮರುದಿನ ಸಂಜೆ 04:30 ಗಂಟೆಗೆ SMVT ಬೆಂಗಳೂರಿಗೆ ಆಗಮಿಸಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರದಲ್ಲಿ ನಿಲುಗಡೆ ಹೊಂದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT