ಹತ್ಯೆಯಾದ ಬಾಲಕ ನಿಶ್ಚಿತ್ 
ರಾಜ್ಯ

ಬೆಂಗಳೂರು: ಟ್ಯೂಷನ್‌ನಿಂದ ವಾಪಸಾಗುತ್ತಿದ್ದ ಬಾಲಕನ ಅಪಹರಿಸಿ ಹತ್ಯೆ; ಪೆಟ್ರೋಲ್‌ ಸುರಿದು ಬೆಂಕಿಯಿಟ್ಟ ದುಷ್ಕರ್ಮಿಗಳು!

ನಿಶ್ಚಿತ್‌ ಅವರ ತಂದೆ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತ್‌ ಮನೆಪಾಠಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ.

ಬೆಂಗಳೂರು: ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್‌ ಮುಗಿಸಿಕೊಂಡು ಬುಧವಾರ ರಾತ್ರಿ ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳಿಗಾಗಿ ಹುಳಿಮಾವು ಠಾಣೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ನಿಶ್ಚಿತ್‌ (13) ಕೊಲೆಯಾದ ಬಾಲಕ. ನಿಶ್ಚಿತ್‌ ಅವರ ತಂದೆ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತ್‌ ಮನೆಪಾಠಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ. ಆಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಬಾಲಕನನ್ನು ಅಪಹರಣ ಮಾಡಿದ್ದರು. ನಂತರ, ನಿಶ್ಚಿತ್‌ ತಂದೆಗೆ ಕರೆ ಮಾಡಿದ್ದ ಆರೋಪಿಗಳು, ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.‌

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ 5 ಲಕ್ಷ ರೂ. ಹಣವನ್ನು ಕೈಯಲ್ಲಿಡಿದು ಪೋಷಕರು ಕಾದು ಕುಳಿತ್ತಿದ್ದರು.

ಹಣ ನೀಡಿ ಮಗನನ್ನು ರಕ್ಷಿಸಲು ಮುಂದಾಗಿದ್ದರು. ಅಷ್ಟರಲ್ಲಿ ಬಾಲಕನ ಮೃತದೇಹವು ಕಗ್ಗಲಿಪುರ ರಸ್ತೆಯ ನಿರ್ಜನ‌ ಪ್ರದೇಶದಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರತ್ಯೇಕ ತಂಡ ರಚಿಸಲಾಗಿದೆ. ಬಾಲಕನನ್ನು ಅಪಹರಣ ಮಾಡಿದ ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಬಾಲಕನ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಮೃತದೇಹದ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಬಂಡೆಯ ಮೇಲೆ ಎಸೆದು ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವು ಬಹುತೇಕ ಸುಟ್ಟು ಹೋಗಿದೆ ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?' ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬೆಂಕಿ ಭಾಷಣ!

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು!

ಮುಂಬೈ ಮೇಯರ್‌ ಆಗಿ ರೀತು ತಾವ್ಡೆ ಅವಿರೋಧ ಆಯ್ಕೆ: 4 ದಶಕಗಳ ನಂತರ ಬಿಜೆಪಿಗೆ ಒಲಿದ ಪಟ್ಟ!

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

SCROLL FOR NEXT