ಹೈಕೋರ್ಟ್ 
ರಾಜ್ಯ

ಧರ್ಮಸ್ಥಳ ಪ್ರಕರಣ: ಮಾಧ್ಯಮ ಮೇಲಿನ ನಿರ್ಬಂಧ ತೆರವು, ಹೈಕೋರ್ಟ್ ಆದೇಶ!

ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ.

ಬೆಂಗಳೂರು: ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿ ಸುದ್ದಿ ಪ್ರಸಾರ/ ಪ್ರಕಟ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮವೊಂದರ ವಿರುದ್ಧ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

ಆದಾಗ್ಯೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಪೀಠ ಆದೇಶಿಸಿದೆ.

ಈ ಸಂಬಂಧ ನಗರ ಸಿವಿಲ್ ಕೋರ್ಟ್ ನ 10ನೇ ಹೆಚ್ಚುವರಿ ನ್ಯಾಯಾಲಯದ ಆದೇಶ ಪ್ರಶ್ನಿಸಿ 'ಕುಡ್ಲ ರ್‍ಯಾಂಪೇಜ್ (Kudla Rampage) ಸಲ್ಲಿಸಿದ್ದ ಅರ್ಜಿಯನ್ನು ಭಾಗಶ: ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪನ್ನು ಶುಕ್ರವಾರ ಪ್ರಕಟಿಸಿತು.

ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಎಲ್ಲಾ ವಾದಗಳು ಮುಕ್ತವಾಗಿರಬೇಕು. ಅಗತ್ಯ ಆದೇಶಗಳನ್ನು ಜಾರಿಗೊಳಿಸಲು ಅರ್ಜಿದಾರರು ಮತ್ತು ಇತರ ಕಕ್ಷಿದಾರರು ಸೆಷನ್ಸ್ ನ್ಯಾಯಾಲಯಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಸುದ್ದಿ ಬಿತ್ತರಿಸಿರುವ ಒಟ್ಟು 8,842 ಆನ್ ಲೈನ್ ಲಿಂಕ್ ಗಳ ಪಟ್ಟಿಯನ್ನು ನಿರ್ಬಂಧಿಸಬೇಕು ಎಂದು ಕೋರಿ ಧರ್ಮಸ್ಥಳ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಸೆಷನ್ಸ್ ನ್ಯಾಯಾಲಯದ ಮುಂದಿರುವ 338 ಪ್ರತಿವಾದಿಗಳಲ್ಲಿ ಕುಡ್ಲ ರ್‍ಯಾಂಪೇಜ್' ಒಬ್ಬರಾಗಿದ್ದು, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸೆಷನ್ಸ್ ನ್ಯಾಯಾಲಯದಿಂದ ಜಾನ್ ಡೋ ಆದೇಶ ಜಾರಿಯಾಗಬಾರದು: ವಿಚಾರಣಾ ನ್ಯಾಯಾಲಯ ನೀಡಿರುವ ಈ ಮಧ್ಯಂತರ ತಡೆ ಆದೇಶ ಸಾಮಾನ್ಯವಾಗಿ ಅಮೆರಿಕ ಕಾನೂನು ವ್ಯವಸ್ಥೆಯಲ್ಲಿ ಅಪರಿಚಿತ ಪ್ರತಿವಾದಿಗಳಿಗೆ ಬಳಸಲಾಗುವ ಜನಪ್ರಿಯ ಜಾನ್ ಡೋ ಆದೇಶವಾಗಿದೆ. ಭಾರತೀಯ ವ್ಯವಸ್ಥೆಯಲ್ಲೂ ಇದು ಅಶೋಕ್ ಕುಮಾರ್ ಪ್ರಕರಣದಲ್ಲಿ ಸ್ಥಳೀಯ ಆದೇಶವಾಗಿ ರೂಪಾಂತರಗೊಂಡಿದೆ. ಜಾನ್ ಡೋ ಆದೇಶದ ಪರಿಕಲ್ಪನೆ ಭಾರತೀಯ ನ್ಯಾಯಶಾಸ್ತ್ರದಲ್ಲಿ ಮನ್ನಣೆ ಪಡೆದುಕೊಂಡಿದೆಯಾದರೂ ಇಂತಹ ಆದೇಶಗಳನ್ನು ನೀಡುವಾಗ ಹೆಚ್ಚಿನ ಕಾಳಜಿ ಹಾಗೂ ವಿವೇಚನಾಯುಕ್ತ ದೂರದೃಷ್ಟಿಯಿಂದ ಬಳಸಬೇಕು. ಇದು ಯಾರೊಬ್ಬರ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT