ಸಂಗ್ರಹ ಚಿತ್ರ 
ರಾಜ್ಯ

ಗೌರಿ-ಗಣೇಶ ಹಬ್ಬ: 75 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ BBMP ಮುಂದು..!

ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ 75 ಏಕಗವಾಕ್ಷಿ ಕೇಂದ್ರ ತೆರೆದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು.

ಬೆಂಗಳೂರು: ಮುಂಬರುವ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಎಲ್ಲಾ 75 ವಲಯ ಕಚೇರಿಗಳಲ್ಲಿ ಏಕಗವಾಕ್ಷಿ ತೆರವು ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್ ಅವರು ಶನಿವಾರ ಘೋಷಿಸಿದ್ದಾರೆ.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಶಾಂತಿ ಸಭೆ ಉದ್ದೇಶಿಸಿ ಮಹೇಶ್ವರ ರಾವ್ ಅವರು ಮಾತನಾಡಿದರು.

ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ 75 ಏಕಗವಾಕ್ಷಿ ಕೇಂದ್ರ ತೆರೆದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು. ಏಕಗವಾಕ್ಷಿ ಕೇಂದ್ರ ವಿಳಾಸ, ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರದಲ್ಲಿ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರತಿ ವರ್ಷದಂತೆ ಗಣೇಶ ವಿಸರ್ಜನೆಗೆ ಪ್ರಮುಖ ಕೆರೆ ಮತ್ತು ಕಲ್ಯಾಣಿಗಳಲ್ಲಿ ವ್ಯವಸ್ಥೆ ಮಾಡಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್‌ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸಾರ್ವಜನಿಕರು ವಾಯುಮಾಲಿನ್ಯ, ನೀರು ಕಲುಷಿತ ಆಗುವಂತಹ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾನೆ ಮಾಡಬಾರದು, ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ವೇಳೆ ಶಾಂತಿ ಕಾಪಾಡಬೇಕು. ನಾಗರಿಕರು ಹಬ್ಬಗಳ ಆಚರಣೆಯ ವೇಳೆ ಎದುರಾಗುವ ಸಮಸ್ಯೆಗಳ ಕುರಿತು ತಿಳಿಸಿದ್ದು, ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಗಣೇಶ ಮೆರವಣಿಗೆಯ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೆಲ ರಸ್ತೆ ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತಿದ್ದು, ಅಂತಹ ರಸ್ತೆಗಳಲ್ಲಿ ಸಮಸ್ಯೆ ಇದ್ದರೆ, ವಿಶೇಷವಾಗಿ ತಾತ್ಕಾಲಿಕ ಕ್ರಮ ಕೈಗೊಳ್ಳಲಾಗುವುದೆಂದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್‌ಸಿಂಗ್ ಮಾತನಾಡಿ, ಹಬ್ಬಗಳನ್ನು ಆಚರಿಸುವ ವೇಳೆ ಬಿಬಿಎಂಪಿ, ಪೊಲೀಸ್ ಇಲಾಖೆಯ ಸಲಹೆ, ಸೂಚನೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಎಲ್ಲಿಯೂ ಸಂಚಾರ ದಟ್ಟಣೆಯಾ ಗದಂತೆ ಸಂಚಾರಿ ಪೊಲೀಸ್ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ವಿಶೇಷ ಆಯುಕ್ತ ನವೀನ್ ಕುಮಾರ್ ರಾಜು, ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಕಾರ್ತಿಕ್ ರೆಡ್ಡಿ, ಬಿಬಿಎಂಪಿ, ಬೆಸ್ಕಾಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು, ವಿವಿಧ ಸಮುದಾಯ ಮುಖಂಡರು ಮತ್ತು ಗಣೇಶೋತ್ಸವದ ಆಯೋಜಕರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ Indian Army ಎಚ್ಚರಿಕೆ!

Operation Sindoor: ಪಾಕಿಸ್ತಾನದ ಐದು ಹೈಟೆಕ್ ಫೈಟರ್‌, ಎಫ್-16, ಜೆಎಫ್-17, ಅನೇಕ ಜೆಟ್‌ಗಳು ನಾಶ- IAF ಮುಖ್ಯಸ್ಥ; Video

"ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ, ನನ್ನ ಅದೃಷ್ಟದ ಮನೆ ಬೇರೆಯದ್ದೇ ಇದೆ..; 2 ಬಾರಿ ಮುಖ್ಯಮಂತ್ರಿಯಾಗಲು ಅದೇ ಕಾರಣ"- Siddaramaiah

1st test: ಕೊನೆಗೂ ನೀಗಿದ ಬರ, 9 ವರ್ಷಗಳ ಬಳಿಕ ತವರಿನಲ್ಲಿ ಕನ್ನಡಿಗ KL Rahul ಶತಕ!

ಆಗ್ರಾ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ 17 ಯುವಕರು ನೀರು ಪಾಲು

SCROLL FOR NEXT