ಹಳದಿ ಮೆಟ್ರೋ ರೈಲು BMRCL
ರಾಜ್ಯ

ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

ಮೆಟ್ರೋ ಹಳದಿ ಮಾರ್ಗದಿಂದಾಗಿ ಸುಮಾರು ಎಂಟು ಲಕ್ಷ ಪ್ರಯಾಣಿಕರಿಗೆ ಪ್ರಯೋಜನವಾಗಲಿದ್ದು, ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.

ಬೆಂಗಳೂರು: ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಆಗಸ್ಟ್​ 10ರಂದು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾನುವಾರ ಘೋಷಿಸಿದ್ದಾರೆ.

'X' ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಎಲ್ಲ ಜನರ ಪರವಾಗಿ, ನಮ್ಮ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಯಾವಾಗಲೂ ಆದ್ಯತೆ ನೀಡಿದ್ದಕ್ಕಾಗಿ ನಾನು ಪ್ರಧಾನಿಗೆ ಧನ್ಯವಾದ ಹೇಳುತ್ತೇನೆ' ಎಂದಿದ್ದಾರೆ.

ಮೆಟ್ರೋ ಹಳದಿ ಮಾರ್ಗದಿಂದಾಗಿ ಸುಮಾರು ಎಂಟು ಲಕ್ಷ ಪ್ರಯಾಣಿಕರಿಗೆ ಪ್ರಯೋಜನವಾಗಲಿದ್ದು, ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಸಾರ್ವಜನಿಕ ಸಾರಿಗೆ ಮಾತ್ರ ದೀರ್ಘಕಾಲೀನ ಪರಿಹಾರವಾಗಿದ್ದು, ಈ ಮಾರ್ಗವನ್ನು ಯಾವುದೇ ವಿಳಂಬವಿಲ್ಲದೆ ಸಾರ್ವಜನಿಕರಿಗೆ ಮುಕ್ತವಾಗಿಸಲು ಮೋದಿಯವರ ವೈಯಕ್ತಿಕ ಪ್ರಯತ್ನವೇ ಸಕಾಲಿಕ ಉದ್ಘಾಟನೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಮೆಟ್ರೋ ಹಳದಿ ಮಾರ್ಗ ಸಂಚಾರಕ್ಕೆ ಆಗಸ್ಟ್ 15 ರ ಗಡುವು ನೀಡಲಾಗಿತ್ತು. ಆದರೆ, ಆಗಸ್ಟ್ 10 ರಂದು ಉದ್ಘಾಟನೆ ನಡೆದರೆ, ಈ ಯೋಜನೆಯು ಗಡುವಿಗಿಂತಲೂ ಮೊದಲೇ ಪೂರ್ಣಗೊಂಡಿದೆ.

ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ 'X' ನಲ್ಲಿ, 'ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳು ಬೆಂಗಳೂರು ಮೆಟ್ರೋದ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.15 ಕಿ.ಮೀ ಹಳದಿ ಮಾರ್ಗವನ್ನು ಉದ್ಘಾಟಿಸಲು ಒಪ್ಪಿಕೊಂಡಿದ್ದಾರೆ. ಈ ಮಾರ್ಗದಲ್ಲಿ 16 ನಿಲ್ದಾಣಗಳಿದ್ದು, 5,056.99 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಇದರೊಂದಿಗೆ 15,611 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಹಂತ-3ರ 44.65 ಕಿ.ಮೀ. ಉದ್ದದ ಹೊಸ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ' ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ನ. 15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್

'India my Matrubhumi', ಜೈ ಶ್ರೀರಾಮ್: ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ಉತ್ತರ ಪ್ರದೇಶದಲ್ಲಿ ಧ್ವನಿವರ್ಧಕದಲ್ಲಿ 'ಹನುಮಾನ್ ಚಾಲೀಸಾ' ಹಾಕಿದ್ದ ಅರ್ಚಕರಿಗೆ ಬೆದರಿಕೆ!

SCROLL FOR NEXT