ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ಕೆಆರ್ಎಸ್ ಗೇಟ್ನ ಹೆಬ್ಬಾಗಿಲಿನಲ್ಲಿ ಈಗಲೂ ಅಡಿಗಲ್ಲು ಇದ್ದು ಈ ಸತ್ಯವನ್ನು ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದು ಹೇಳಿದರು.
ಟಿಪ್ಪು ಸುಲ್ತಾನ್ ನನ್ನು ಹೊಗಳುವ ಭರದಲ್ಲಿ ಸಚಿವರು ಮೈಸೂರು ಅರಸರ ಸಾಧನೆಯನ್ನು ಕಡೆಗಣಿಸುವ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಟಿಪ್ಪು ಸುಲ್ತಾನ್ ದೇವದಾಸಿ ಪದ್ಧತಿ ರದ್ದು ಮಾಡಿದರು. ಟಿಪ್ಪು ಸುಲ್ತಾನ್ ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ. ಟಿಪ್ಪು ಸುಲ್ತಾನ್ ಭಾರತ ದೇಶಕ್ಕೆ ರೇಷ್ಮೆ ಕೃಷಿ ತಂದರು. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲಿ. ಟಿಪ್ಪು ಸುಲ್ತಾನ್ ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ ಎಂದು ಹೇಳಿದರು.