ನಟಿ ರಮ್ಯಾ 
ರಾಜ್ಯ

ನಟಿ ರಮ್ಯಾ ವಿರುದ್ಧ ಅಶ್ಲೀಲ-ಬೆದರಿಕೆ ಸಂದೇಶ; ಮತ್ತಿಬ್ಬರು ವಶಕ್ಕೆ, ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಬಂಧಿತರನ್ನು ಭುವನ್‌ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತರನ್ನು ಭುವನ್‌ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 2ರಂದು ಟಿ ಓಬಣ್ಣ ಮತ್ತು ಗಂಗಾಧರ ಎಂಬುವವರನ್ನು ಬಂಧಿಸಲಾಗಿತ್ತು.

ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.

ಇನ್‌ಸ್ಟಾಗ್ರಾಂ ಖಾತೆಗಳಿಂದ ಆರೋಪಿಗಳು ರಮ್ಯಾ ಅವರಿಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶವನ್ನು ಕಳುಹಿಸಿದ್ದರು. ಆ ಖಾತೆಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಮತ್ತು ವಿವಿಧ ಜಿಲ್ಲೆಗಳಲ್ಲಿರುವ ಖಾತೆಗಾರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ, 'ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಕಿರಣ ಇದ್ದಂತೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿ' ಎಂದು ಬರೆದಿದ್ದರು. ಇದರಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡ ಆರೋಪಿಗಳು ರಮ್ಯಾ ಅವರನ್ನು ನಿಂದಿಸಿದ್ದರು. ಅಶ್ಲೀಲವಾಗಿ ಕಮೆಂಟ್ ಮಾಡುವುದಲ್ಲದೆ, ಅಶ್ಲೀಲ ಮತ್ತು ಬೆದರಿಕೆ ಸಂದೇಶವನ್ನು ಕಳುಸಿಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!