ಧರ್ಮಸ್ಥಳ ಪ್ರಕರಣ 
ರಾಜ್ಯ

ಧರ್ಮಸ್ಥಳ ಪ್ರಕರಣ: ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ SITಗೆ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ.

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ.

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಥಳ ಸಂಖ್ಯೆ 11 ರಲ್ಲಿ ಅಗೆಯುವಿಕೆಯನ್ನು ಪುನರಾರಂಭಿಸಲು ಎಸ್‌ಐಟಿ ಅಧಿಕಾರಿಗಳು ಮತ್ತು ದೂರುದಾರರು ಧರ್ಮಸ್ಥಳ ಗ್ರಾಮದ ಹೆದ್ದಾರಿ ಬದಿಯ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಆದರೆ ಗುರುತಿಸಿದ ಸಮಾಧಿ ಸ್ಥಳ ಬಿಟ್ಟು ತಂಡ ಕಾಡಿನೊಳಕ್ಕೆ ಪ್ರವೇಶಿಸಿದ್ದು ಅಲ್ಲಿ ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಇನ್ನು ಪಾಯಿಂಟ್ 11ರ ಬಳಿ ಸಮಾಧಿ ಅಗೆದ ಜಾಗದಲ್ಲಿ ಅಸ್ಥಿಪಂಜರ ಸಿಕ್ಕಿದೆಯಾ? ಇಲ್ಲವ? ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ಅಧಿಕಾರಿಗಳಿಂದ ನಿರೀಕ್ಷಿಸಲಾಗಿದೆ.

ಸ್ಥಳದಲ್ಲಿ ಪುರುಷನದ್ದೆಂದು ಶಂಕಿಸಲಾದ ಮಾನವ ಅಸ್ಥಿಪಂಜರ ಅವಶೇಷಗಳು ಹಗ್ಗ ಮತ್ತು ಕೆಲವು ಬಟ್ಟೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸಲು ಅವಶೇಷಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗುವುದು ಮತ್ತು ಪೊಲೀಸರು ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT