ವಿಧಾನಸೌಧ-ಸಿಎಂ ಸಿದ್ದರಾಮಯ್ಯ online desk
ರಾಜ್ಯ

ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ: Anti-Narcotics Task Force ರಚನೆ

ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಮುನ್ನಡೆಸುವ ಸಲುವಾಗಿ ರಾಜ್ಯ ಸರ್ಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಹುದ್ದೆಯನ್ನು ಕೂಡ ರಚಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯಗಳ ಹಾವಳಿಯನ್ನು ನಿಗ್ರಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಅನ್ನು ಸ್ಥಾಪಿಸಿದೆ. ಹೊಸದಾಗಿ ರಚಿಸಲಾದ ಈ ಕಾರ್ಯಪಡೆಗೆ ಒಟ್ಟು 66 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಮುನ್ನಡೆಸುವ ಸಲುವಾಗಿ ರಾಜ್ಯ ಸರ್ಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಹುದ್ದೆಯನ್ನು ಕೂಡ ರಚಿಸಿದೆ.

ಆಗಸ್ಟ್ 1, 2025 ರ ಸರ್ಕಾರಿ ಆದೇಶದ ಪ್ರಕಾರ, ಘಟಕವು ನೇರವಾಗಿ ಪೊಲೀಸ್ ಮಹಾನಿರ್ದೇಶಕ (ಸೈಬರ್ ಕಮಾಂಡ್) ಪ್ರಣವ್ ಮೊಹಂತಿ ಅವರಿಗೆ ವರದಿ ಮಾಡುತ್ತದೆ. ANTF ಗಾಗಿ 10 ಹೊಸ ಹುದ್ದೆಗಳನ್ನು ರಚಿಸಲಾಗಿದ್ದು, ನಕ್ಸಲ್ ವಿರೋಧಿ ಪಡೆ (ANF) ಯ 56 ಸಿಬ್ಬಂದಿಯನ್ನು ಈ ಕಾರ್ಯಪಡೆಗೆ ವರ್ಗಾಯಿಸಲಾಗಿದೆ.

ಹೊಸದಾಗಿ ರಚಿಸಲಾದ ಈ ಕಾರ್ಯಪಡೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್‌ಗಳು (ಹೆಚ್ಚುವರಿ ಎಸ್‌ಪಿಗಳು) ಮತ್ತು ಉಪ ಪೊಲೀಸ್ ಸೂಪರಿಂಟೆಂಡೆಂಟ್ (DySP), ಒಬ್ಬ ಸಹಾಯಕ ಆಡಳಿತ ಅಧಿಕಾರಿ, ಸೂಪರಿಂಟೆಂಡೆಂಟ್‌ಗಳು, ಜೂನಿಯರ್ ಸಹಾಯಕರು, ಪ್ರಥಮ ದರ್ಜೆ ಸಹಾಯಕರು, ಸ್ಟೆನೋಗ್ರಾಫರ್‌ಗಳು ಮತ್ತು ದಲಾಯತ್‌ಗಳು ಇರಲಿದ್ದಾರೆ.

ANF ನಿಂದ ವರ್ಗಾವಣೆಗೊಂಡ 56 ಸಿಬ್ಬಂದಿಗಳಲ್ಲಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ಗಳು (PSI ಗಳು), 20 ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು 30 ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ.

ರಾಜ್ಯಾದ್ಯಂತ ಮಾದಕವಸ್ತು ಕಳ್ಳಸಾಗಣೆ, ವಿತರಣೆ ಮತ್ತು ದುರುಪಯೋಗವನ್ನು ಹತ್ತಿಕ್ಕಲು ANTF ಅನ್ನು ಸಮರ್ಪಿತ ಮತ್ತು ವಿಶೇಷ ಪಡೆಯಾಗಿ ರಚಿಸಲಾಗಿದೆ. ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಮಾಡಲು ಜಿಲ್ಲೆಗಳು, ಕೇಂದ್ರ ಮತ್ತು ಗುಪ್ತಚರ ಘಟಕಗಳ ನಡುವಿನ ಸಮನ್ವಯವನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಪಡೆ ಹೊಂದಿದೆ ಎಂದು ಹಿರಿಯ IPS ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT